alex Certify
ಕನ್ನಡ ದುನಿಯಾ       Mobile App
       

Kannada Duniya

‘ಆಧಾರ್ ಗೆ ಲಿಂಕ್ ಆಗದ ಮೊಬೈಲ್ ಸಂಪರ್ಕ ಕಡಿತವಾಗಲ್ಲ’

ನವದೆಹಲಿ: ಆಧಾರ್ ಗೆ ಜೋಡಣೆ ಮಾಡದ ಮೊಬೈಲ್ ಸಂಪರ್ಕವನ್ನು ಕಡಿತಗೊಳಿಸುವುದಿಲ್ಲ ಎಂದು ದೂರ ಸಂಪರ್ಕ ಇಲಾಖೆಯ ಕಾರ್ಯದರ್ಶಿ ಅರುಣಾ ಸುಂದರರಾಜನ್ ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್ ನಲ್ಲಿ ಮೊಬೈಲ್ – ಆಧಾರ್ ಸಂಪರ್ಕ ಕುರಿತಾದ ಹಲವು ಪ್ರಕರಣಗಳು ವಿಚಾರಣೆಯಲ್ಲಿದ್ದು, ದೂರ ಸಂಪರ್ಕ ಇಲಾಖೆ ತೀರ್ಪಿಗಾಗಿ ಕಾಯುತ್ತಿದೆ ಎಂದು ಹೇಳಿದ್ದಾರೆ.

2018 ರ ಫೆಬ್ರವರಿ ಒಳಗೆ ಮೊಬೈಲ್ ಗಳಿಗೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡುವಂತೆ ಟೆಲಿಕಾಂ ಕಂಪನಿಗಳಿಗೆ ಸೂಚನೆ ನೀಡಲಾಗಿದೆ. ಜೋಡಣೆ ಮಾಡದ ಮೊಬೈಲ್ ಸಂಪರ್ಕವನ್ನು ಸದ್ಯಕ್ಕೆ ಕಡಿತಗೊಳಿಸಲಾಗುವುದಿಲ್ಲ. ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದ್ದು, ತೀರ್ಪಿನ ನಂತರವಷ್ಟೇ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಟೆಲಿಕಾಂ ಸಚಿವ ಮನೋಜ್ ಸಿನ್ಹಾ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಫೆಬ್ರವರಿಯಲ್ಲಿ ಹೊಸ ದೂರ ಸಂಪರ್ಕ ನೀತಿಯನ್ನು ಅಂತಿಮಗೊಳಿಸಲಾಗುವುದು. ಡಿಸೆಂಬರ್ ಅಂತ್ಯದ ವೇಳೆಗೆ ಸಾರ್ವಜನಿಕ ಅಭಿಪ್ರಾಯಗಳನ್ನು ಪಡೆಯಲು ಕರಡು ಪ್ರತಿಯನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ನವೆಂಬರ್ ಅಂತ್ಯದ ವೇಳೆಗೆ ಮೊದಲ ಹಂತದ ಹೈಸ್ಪೀಡ್ ಬ್ರಾಡ್ ಬ್ಯಾಂಡ್ ಯೋಜನೆಯನ್ನು ಪೂರ್ಣಗೊಳಿಸಲಾಗುತ್ತದೆ. 75,000 ಕ್ಕೂ ಅಧಿಕ ಗ್ರಾಮ ಪಂಚಾಯತ್ ಗಳು ಬ್ರಾಡ್ ಬ್ಯಾಂಡ್ ಸೇವೆಗಳೊಂದಿಗೆ ಸಿದ್ಧವಾಗಿವೆ. ತಿಂಗಳಾಂತ್ಯಕ್ಕೆ ಇವುಗಳ ಸಂಖ್ಯೆ 1 ಲಕ್ಷಕ್ಕೆ ಏರಿಕೆಯಾಗಲಿದೆ. ಭಾರತ್ ನೆಟ್ ಯೋಜನೆಯಿಂದಾಗಿ ಕನಿಷ್ಠ 5 ಲಕ್ಷ ಉದ್ಯೋಗಾವಕಾಶ ಸಿಗಲಿದೆ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...