alex Certify
ಕನ್ನಡ ದುನಿಯಾ       Mobile App
       

Kannada Duniya

ವಿಜಯ್ ಮಲ್ಯಗೆ ಸಿಕ್ತು ಸಾಲ ಮನ್ನಾ ಭಾಗ್ಯ

vijay-mallya

ನವದೆಹಲಿ: ವಿವಿಧ ಬ್ಯಾಂಕ್ ಗಳಿಗೆ ಸುಮಾರು 9,000 ಕೋಟಿ ರೂ. ಸಾಲ ಕೊಡಬೇಕಿರುವ ಉದ್ಯಮಿ ವಿಜಯ್ ಮಲ್ಯ ವಿದೇಶಕ್ಕೆ ಪರಾರಿಯಾಗಿದ್ದು, ಅವರಿಂದ ಸಾಲ ವಸೂಲಿ ಮಾಡಲು ಬ್ಯಾಂಕ್ ಗಳು ಏನೆಲ್ಲಾ ಕ್ರಮ ಕೈಗೊಂಡಿವೆ.

ಇದೇ ಸಂದರ್ಭದಲ್ಲಿ ಭಾರತೀಯ ಸ್ಟೇಟ್ ಬ್ಯಾಂಕ್(ಎಸ್.ಬಿ.ಐ) ವಿಜಯ್ ಮಲ್ಯ ಅವರ ಕಿಂಗ್ ಫಿಶರ್ ಏರ್ ಲೈನ್ಸ್ ಗೆ ಸೇರಿದ 1201 ಕೋಟಿ ರೂಪಾಯಿ ಸಾಲವನ್ನು ಮನ್ನಾ ಮಾಡಿದೆ. ವಿಜಯ್ ಮಲ್ಯ ಸೇರಿದಂತೆ ಸುಮಾರು 63 ಮಂದಿ ಉದ್ದೇಶಪೂರ್ವಕ ಸುಸ್ತಿದಾರರ ಸುಮಾರು 7000 ಕೋಟಿ ರೂ. ಸಾಲವನ್ನು ಎಸ್.ಬಿ.ಐ. ಮನ್ನಾ ಮಾಡಿದೆ. ಈ ಸುಸ್ತಿದಾರರೆಲ್ಲರ ಸಾಲವನ್ನು ಅಡ್ವಾನ್ಸಡ್ ಅಂಡರ್ ಕಲೆಕ್ಷನ್ ಅಕೌಂಟ್ ಕೆಟಗರಿಗೆ ಸೇರಿಸಲಾಗಿದೆ.

ನೂರಾರು ಕೋಟಿ ರೂ. ಸಾಲ ಮಾಡಿ ಉದ್ದೇಶಪೂರ್ವಕ ಸುಸ್ತಿದಾರರಾಗಿರುವವರ ಸಾಲವನ್ನು ಮನ್ನಾ ಮಾಡಿರುವುದಕ್ಕೆ ಸಂಸತ್ ನಲ್ಲೂ ಆಕ್ರೋಶ ವ್ಯಕ್ತವಾಗಿದೆ.

ಆದರೆ, ಈ ಕುರಿತು ಪ್ರತಿಕ್ರಿಯೆ ನೀಡಿರುವ ಹಣಕಾಸು ಸಚಿವ ಅರುಣ್ ಜೇಟ್ಲಿ, ಎಸ್.ಬಿ.ಐ. ಉದ್ದೇಶಪೂರ್ವಕ ಸುಸ್ತಿದಾರರ ಸಾಲವನ್ನು ಮನ್ನಾ ಮಾಡಿಲ್ಲ. ದುಡಿಯದ ಬಂಡವಾಳ ಪುಸ್ತಕಕ್ಕೆ ಸೇರಿಸಲಾಗಿದೆ. ಅವರಿಂದ ಸಾಲ ವಸೂಲಿ ಮಾಡುವ ಹಕ್ಕು ಬ್ಯಾಂಕ್ ಗಳಿಗೆ ಇದೆ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...