alex Certify
ಕನ್ನಡ ದುನಿಯಾ       Mobile App
       

Kannada Duniya

ಗುಡ್ ನ್ಯೂಸ್: ಇಂದು ನನಸಾಗುತ್ತಿದೆ ಮೆಟ್ರೋ ಪ್ರಯಾಣಿಕರ ಬಹುದಿನಗಳ ಕನಸು

ಬೆಂಗಳೂರಿನ ‘ನಮ್ಮ ಮೆಟ್ರೋ’ ಪ್ರಯಾಣಿಕರ ಬಹುದಿನಗಳ ಕನಸು ಇಂದು ನನಸಾಗಲಿದೆ. 6 ಬೋಗಿಗಳ ಮೆಟ್ರೋ ರೈಲು ಇಂದಿನಿಂದ ಸಂಚಾರ ಆರಂಭಿಸಲಿದ್ದು, ಇದರಿಂದ ಪ್ರಯಾಣಿಕರ ದಟ್ಟಣೆ ಕಡಿಮೆಯಾಗಲಿದೆ.

ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರ ಉಪಸ್ಥಿತಿಯಲ್ಲಿ 6 ಬೋಗಿಗಳ ಮೆಟ್ರೋ ರೈಲು ಸಂಚಾರ ಉದ್ಘಾಟನೆಗೊಳ್ಳಲಿದೆ.

ಈವರೆಗೂ ಮೂರು ಬೋಗಿಗಳ ಮೆಟ್ರೋ ರೈಲು ಸಂಚರಿಸುತ್ತಿದ್ದು, ಇದರಲ್ಲಿ ಕೇವಲ 900 ಮಂದಿ ಪ್ರಯಾಣಿಕರು ಮಾತ್ರ ಪ್ರಯಾಣಿಸಬಹುದಾಗಿತ್ತು. ಇಂದಿನಿಂದ ಆರು ಬೋಗಿಗಳ ರೈಲು ಸಂಚರಿಸಲಿದ್ದು, 1800 ಮಂದಿ ಪ್ರಯಾಣಿಸಬಹುದಾಗಿದೆ. ಅಲ್ಲದೆ ಮೊದಲ ಬೋಗಿಯನ್ನು ಮಹಿಳೆಯರಿಗೆ ಮೀಸಲಿರಿಸಿದ್ದು, ಸುರಕ್ಷಿತ ಪ್ರಯಾಣಕ್ಕೆ ಅನುಕೂಲವಾಗಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...