alex Certify
ಕನ್ನಡ ದುನಿಯಾ       Mobile App
       

Kannada Duniya

ಡೆಬಿಟ್ ಕಾರ್ಡ್ ಬಳಕೆದಾರರಿಗೆ ಶುಭ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಡೆಬಿಟ್ ಕಾರ್ಡ್, ಭೀಮ್ ಸೇರಿದಂತೆ ಆನ್ ಲೈನ್ ವಹಿವಾಟಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿ ಇತರೆ ಆಪ್ ಗಳನ್ನು ಬಳಸುತ್ತಿದ್ದವರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ. ಜನವರಿ 1 ರಿಂದ ಜಾರಿಗೆ ಬರುವಂತೆ 2000 ರೂ. ವರೆಗಿನ ಇಂತಹ ವಹಿವಾಟುಗಳಿಗೆ ಯಾವುದೇ ಶುಲ್ಕ ವಿಧಿಸದಿರಲು ತೀರ್ಮಾನಿಸಲಾಗಿದೆ.

ದೇಶಾದ್ಯಂತ ಆನ್ ಲೈನ್ ವಹಿವಾಟು ಹೆಚ್ಚುತ್ತಿದ್ದು, ಇದಕ್ಕೆ ಉತ್ತೇಜನ ನೀಡುವ ಸಲುವಾಗಿ ಹಣಕಾಸು ಇಲಾಖೆ ಈ ತೀರ್ಮಾನ ಕೈಗೊಂಡಿದ್ದು, ಡಿಸೆಂಬರ್ ತ್ರೈಮಾಸಿಕದಲ್ಲಿ ಭೀಮ್ ವಹಿವಾಟಿನಲ್ಲಿ ಶೇ.86 ರಷ್ಟು ಹೆಚ್ಚಾಗಿದೆ ಎಂದು ಹಣಕಾಸು ಇಲಾಖೆ ಕಾರ್ಯದರ್ಶಿ ರಾಜೀವ್ ಕುಮಾರ್ ತಮ್ಮ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಆನ್ ಲೈನ್ ವ್ಯವಹಾರದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ 2 ಸಾವಿರ ರೂ.ವರೆಗಿನ ವಹಿವಾಟಿಗೆ ಯಾವುದೇ ಶುಲ್ಕ ವಿಧಿಸುವುದಿಲ್ಲವೆನ್ನಲಾಗಿದ್ದು, ಇದರಿಂದ ಗ್ರಾಹಕರು ಹಾಗೂ ವ್ಯಾಪಾರಸ್ಥರಿಗೆ ಅನುಕೂಲವಾಗಲಿದೆ.

Subscribe Newsletter

Get latest updates on your inbox...

Opinion Poll

  • ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆಯುತ್ತಾ ಬಿಜೆಪಿ...?

    View Results

    Loading ... Loading ...