alex Certify
ಕನ್ನಡ ದುನಿಯಾ       Mobile App
       

Kannada Duniya

ಆಧಾರ್–ಪಾನ್ ಕಾರ್ಡ್ ಲಿಂಕ್ ಗೆ ನಿಗದಿಯಾಗಿಲ್ಲ ಗಡುವು

adr-pan-link

ನವದೆಹಲಿ: ಪಾನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡುವ ಕುರಿತಾಗಿ ಯಾವುದೇ ಸಮಯವನ್ನು ನಿಗದಿ ಮಾಡಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.

ಹಣಕಾಸು ಖಾತೆ ಸಚಿವ ಅರುಣ್ ಜೇಟ್ಲಿ ಲೋಕಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿದ್ದು, 12 ಅಂಕೆಗಳ ಆಧಾರ್ ನಂಬರ್ ಅನ್ನು ಪಾನ್ ಕಾರ್ಡ್ ಗೆ ಜೋಡಣೆ ಮಾಡಲು ಸಮಯವನ್ನು ನಿಗದಿ ಮಾಡಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ.

ತೆರಿಗೆ ಕಟ್ಟುವುದನ್ನು ತಪ್ಪಿಸುವುದು ಸೇರಿ ಹಲವು ಕಾರಣದಿಂದ ಕೆಲವರು ಹೆಚ್ಚು ಪಾನ್ ಕಾರ್ಡ್ ಗಳನ್ನು ಪಡೆಯುವುದನ್ನು ನಿಲ್ಲಿಸಲು ಪಾನ್ ಕಾರ್ಡ್ ಗೆ ಆಧಾರ್ ಜೋಡಣೆಯನ್ನು ಕಡ್ಡಾಯ ಮಾಡಲಾಗಿದೆ.

ಜೂನ್ 28 ರ ಅಂತ್ಯಕ್ಕೆ ಸುಮಾರು 25 ಕೋಟಿ ಮಂದಿ ಆಧಾರ್ ಕಾರ್ಡ್ ಪಡೆದುಕೊಂಡಿದ್ದಾರೆ. 111 ಕೋಟಿ ಜನರಿಗೆ ಆಧಾರ್ ಕಾರ್ಡ್ ನೀಡಲಾಗಿದೆ.

ಪಾನ್ ಗೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡಲು ಆಗಸ್ಟ್ 31 ಕೊನೆಯ ದಿನಾಂಕವೆಂದು ಹಿಂದೆ ಹೇಳಲಾಗಿತ್ತು. ಆದರೆ, ಸಚಿವ ಅರುಣ್ ಜೇಟ್ಲಿ ಯಾವುದೇ ಸಮಯ ನಿಗದಿಪಡಿಸಿಲ್ಲ ಎಂದು ಲೋಕಸಭೆಯಲ್ಲಿ ಮಾಹಿತಿ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...