alex Certify
ಕನ್ನಡ ದುನಿಯಾ       Mobile App
       

Kannada Duniya

ಪೆಟ್ರೋಲ್, ಡೀಸೆಲ್ ಮೇಲಿನ VAT ಕಡಿತಕ್ಕೆ ರಾಜ್ಯಗಳಿಗೆ ಸೂಚನೆ

ಎಲ್ಲಾ ರಾಜ್ಯಗಳಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು (ವ್ಯಾಟ್) ಶೇ.5ರಷ್ಟು ಕಡಿಮೆ ಮಾಡುವಂತೆ ಕೇಂದ್ರ ಸರ್ಕಾರ ಸೂಚಿಸಿದೆ. ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಈ ವಿಷಯ ತಿಳಿಸಿದ್ದಾರೆ.

ಮೊನ್ನೆಯಷ್ಟೆ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ಎಕ್ಸೈಸ್ ಡ್ಯೂಟಿ ಕಡಿತಗೊಳಿಸಿತ್ತು. ವ್ಯಾಟ್ ಜೊತೆಗೆ ರಾಜ್ಯ ಸರ್ಕಾರಗಳಿಗೆ ಸೆಂಟ್ರಸ್ ಎಕ್ಸೈಸ್ ಕಲೆಕ್ಷನ್ ನಿಂದ್ಲೂ ಆದಾಯ ಸಂಗ್ರಹವಾಗುತ್ತದೆ. ಹಾಗಾಗಿ ಪೆಟ್ರೋಲ್, ಡೀಸೆಲ್ ಮಾರಾಟದಿಂದ ಅತಿ ಹೆಚ್ಚು ಲಾಭವಾಗುತ್ತಿರುವುದು ಕೇಂದ್ರಕ್ಕಲ್ಲ ಅಂತಾ ಅವರು ತಿಳಿಸಿದ್ದಾರೆ.

ವ್ಯಾಟ್ ಕಡಿತ ಮಾಡುವಂತೆ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಎಲ್ಲಾ ರಾಜ್ಯಗಳಿಗೆ ಪತ್ರ ಬರೆದಿದ್ದಾರೆ. ಈ ಮೊದಲು ಆದಾಯ ಖೋತಾ ಆಗಬಹುದು ಅನ್ನೋ ಕಾರಣಕ್ಕೆ ಕೇಂದ್ರ, ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಎಕ್ಸೈಸ್ ಡ್ಯೂಟಿ ಕಡಿಮೆ ಮಾಡಲು ನಿರಾಕರಿಸಿತ್ತು.

ಆದ್ರೀಗ ಖುದ್ದು ಪ್ರಧಾನಿ ನರೇಂದ್ರ ಮೋದಿ ಅವರ ಸೂಚನೆ ಮೇರೆಗೆ ಇಳಿಕೆ ಮಾಡಲಾಗಿದೆ. ಪೆಟ್ರೋಲ್ ಮೇಲಿನ ಎಕ್ಸೈಸ್ ಡ್ಯೂಟಿ ಕಡಿತದಿಂದ ಕೇಂದ್ರಕ್ಕೆ ವಾರ್ಷಿಕ 26,000 ಕೋಟಿ ನಷ್ಟವಾಗಲಿದೆ ಅಂತಾ ಅಂದಾಜಿಸಲಾಗಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...