alex Certify
ಕನ್ನಡ ದುನಿಯಾ       Mobile App
       

Kannada Duniya

ಪೆಟ್ರೋಲ್, ಡೀಸೆಲ್ ಗೂ GST….ಅರುಣ್ ಜೇಟ್ಲಿ ಹೇಳಿದ್ದೇನು?

ಪೆಟ್ರೋಲ್, ಡೀಸೆಲ್, ಎಲ್ ಪಿ ಜಿ ಸೇರಿದಂತೆ ಪೆಟ್ರೋಲಿಯಂ ಉತ್ಪನ್ನಗಳನ್ನೆಲ್ಲ ಜಿಎಸ್ಟಿ ಅಡಿಯಲ್ಲಿ ತರುವ ಬಗ್ಗೆ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಒಲವು ತೋರಿದ್ದಾರೆ. ಈ ಬಗ್ಗೆ ಎಲ್ಲಾ ರಾಜ್ಯಗಳ ಸಮ್ಮತಿ ಪಡೆಯಲು ಚಿಂತನೆ ನಡೆಸಿದ್ದಾರೆ.

ರಾಜ್ಯಸಭೆಯಲ್ಲಿ ವಿಪಕ್ಷ ಸದಸ್ಯರು ಕೇಳಿದ ಪ್ರಶ್ನೆಗೆ ಅವರು ಉತ್ತರಿಸುತ್ತಿದ್ರು. ಈಗ ಬಿಜೆಪಿ 19 ರಾಜ್ಯಗಳಲ್ಲಿ ಅಧಿಕಾರದಲ್ಲಿದೆ. ಹಾಗಾಗಿ ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್ಟಿ ಅಡಿ ತರದಂತೆ ಯಾರು ಕೇಂದ್ರ ಸರ್ಕಾರವನ್ನು ತಡೆಯುತ್ತಿದ್ದಾರೆ ಅಂತಾ ಪಿ.ಚಿದಂಬರಂ ಪ್ರಶ್ನಿಸಿದ್ರು.

ಯುಪಿಎ ಕೂಡ ಜಿಎಸ್ಟಿ ಮಸೂದೆ ಸಿದ್ಧಪಡಿಸುವ ಸಂದರ್ಭದಲ್ಲಿ ಪೆಟ್ರೋಲಿಯಂ ಉತ್ಪನ್ನಗಳನ್ನು ಸೇರ್ಪಡೆ ಮಾಡಿರಲಿಲ್ಲ. ಎಲ್ಲಾ ರಾಜ್ಯಗಳೊಂದಿಗೆ ಚರ್ಚಿಸಿ, ಸಾಧಕ-ಬಾಧಕಗಳನ್ನು ನೋಡಿಕೊಂಡು ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ ಅಂತಾ ಚಿದು ಪ್ರಶ್ನೆಗೆ ಜೇಟ್ಲಿ ಉತ್ತರಿಸಿದ್ದಾರೆ. ಪೆಟ್ರೋಲಿಯಂ ಉತ್ಪನ್ನಗಳು, ವಿದ್ಯುತ್ ಅನ್ನು ಕೂಡ ಭವಿಷ್ಯದಲ್ಲಿ ಜಿಎಸ್ಟಿ ಅಡಿಯಲ್ಲಿ ತರಲಾಗುವುದು ಅಂತಾ ಬಿಹಾರದ ಹಣಕಾಸು ಸಚಿವ ಸುಶೀಲ್ ಮೋದಿ ಸುಳಿವು ನೀಡಿದ್ದರು.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...