alex Certify
ಕನ್ನಡ ದುನಿಯಾ       Mobile App
       

Kannada Duniya

ವಾಹನ ಸವಾರರಿಗೆ ಸಿಹಿ ಸುದ್ದಿ ನೀಡಿದ ಬಂಕ್ ಮಾಲೀಕರು

ನವದೆಹಲಿ: ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಅಕ್ಟೋಬರ್ 13 ರಂದು ಪೆಟ್ರೋಲ್ ಪಂಪ್ ಡೀಲರ್ ಗಳು ಕೈಗೊಂಡಿದ್ದ ಮುಷ್ಕರವನ್ನು ಕೈಬಿಡಲಾಗಿದೆ.

ಪೆಟ್ರೋಲ್, ಡೀಸೆಲ್ ಅನ್ನು ಜಿ.ಎಸ್.ಟಿ. ವ್ಯಾಪ್ತಿಗೆ ತರಬೇಕು. ದೈನಂದಿನ ಬೆಲೆ ಪರಿಷ್ಕರಣೆ ನಿಯಮ ಕೈಬಿಡಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಯುನೈಟೆಡ್ ಪೆಟ್ರೋಲಿಯಂ ಫ್ರಂಟ್ ಮುಷ್ಕರಕ್ಕೆ ಕರೆ ನೀಡಿತ್ತು.

ಆಲ್ ಇಂಡಿಯಾ ಪೆಟ್ರೋಲಿಯಂ ಟ್ರೇಡರ್ಸ್ ಒಕ್ಕೂಟ, ಅಖಿಲ ಭಾರತ ಪೆಟ್ರೋಲಿಯಂ ಡೀಲರ್ಸ್ ಅಸೋಸಿಯೇಷನ್ ಮತ್ತು ಭಾರತೀಯ ಪೆಟ್ರೋಲಿಯಂ ಡೀಲರ್ ಗಳ ಒಕ್ಕೂಟವನ್ನೊಳಗೊಂಡ ಯುನೈಟೆಡ್ ಪೆಟ್ರೋಲಿಯಂ ಫ್ರಂಟ್, ತೈಲ ಕಂಪನಿಗಳ ಮನವಿ ಮೇರೆಗೆ ಮುಷ್ಕರವನ್ನು ಸ್ಥಗಿತಗೊಳಿಸಿದೆ.

ಬೇಡಿಕೆ ಈಡೇರಿಸುವಂತೆ ಕಂಪನಿಗಳೊಂದಿಗೆ ಮಾತುಕತೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅಖಿಲ ಭಾರತ ಪೆಟ್ರೋಲಿಯಂ ಡೀಲರ್ಸ್ ಅಸೋಸಿಯೇಷನ್ ಅಧ್ಯಕ್ಷ ಅಜಯ್ ಬನ್ಸಾಲ್ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...