alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರತಿಭಟನೆಗೆ ಮುಂದಾದ ಪೆಟ್ರೋಲಿಯಂ ವಿತರಕರು

petrol-pr-mon

ಹುಬ್ಬಳ್ಳಿ: ಕಮಿಷನ್ ಹೆಚ್ಚಳ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಪೆಟ್ರೋಲಿಯಂ ವಿತರಕರು ಅಕ್ಟೋಬರ್ 19 ರಿಂದ ವಿವಿಧ ಹಂತಗಳಲ್ಲಿ ಹೋರಾಟ ಕೈಗೊಂಡಿದ್ದಾರೆ.

ಅಕ್ಟೋಬರ್ 19 ರಂದು ಸಂಜೆ 7 ಗಂಟೆಯಿಂದ 7.15 ರವರೆಗೆ ರಾಜ್ಯದ ಎಲ್ಲಾ ಪೆಟ್ರೋಲ್ ಬಂಕ್ ಗಳಲ್ಲಿ ಮಾರಾಟ ಸ್ಥಗಿತಗೊಳಿಸಲಾಗುವುದು ಎಂದು ಕರ್ನಾಟಕ ಪೆಟ್ರೋಲಿಯಂ ವಿತರಕರ ಸಂಘದ ಅಧ್ಯಕ್ಷ ಪ್ರಕಾಶ ಮಿರ್ಜಾನಕರ ತಿಳಿಸಿದ್ದಾರೆ. ಅಖಿಲ ಭಾರತ ಪೆಟ್ರೋಲಿಯಂ ವಿತರಕರ ಸಂಘ ಕರೆ ನೀಡಿರುವ ಹೋರಾಟವನ್ನು ಬೆಂಬಲಿಸಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಪೆಟ್ರೋಲ್ ಸಾಗಣೆ ಸಮಸ್ಯೆಗಳನ್ನು ಪರಿಹರಿಸಬೇಕು. ಕಮಿಷನ್ ಹೆಚ್ಚಳ ಮಾಡಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಅಕ್ಟೋಬರ್ 19 ರಂದು ಬೇಡಿಕೆ ಈಡೇರಿಸಲು ಮುಂದಾಗದಿದ್ದರೆ, ಅಕ್ಟೋಬರ್ 26 ರಂದು ಮತ್ತೆ ಸಂಜೆ 7 ಗಂಟೆಯಿಂದ 7.15 ರ ವರೆಗೆ ಮಾರಾಟ ಸ್ಥಗಿತಗೊಳಿಸಲಾಗುವುದು. ನವೆಂಬರ್ 3 ರಂದು ತೈಲ ಕಂಪನಿಗಳಿಂದ ಪೆಟ್ರೋಲ್ ಖರೀದಿಸುವುದಿಲ್ಲ. ನವೆಂಬರ್ 15 ರಂದು ಮಾರಾಟ, ಖರೀದಿ ಸ್ಥಗಿತಗೊಳಿಸಲಾಗುವುದು. ಹೀಗೆ ವಿವಿಧ ಹಂತದಲ್ಲಿ ಹೋರಾಟ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...