alex Certify
ಕನ್ನಡ ದುನಿಯಾ       Mobile App
       

Kannada Duniya

ಹಳ್ಳಿಗಾಡಿನ 500 ರೈಲ್ವೆ ನಿಲ್ದಾಣದಲ್ಲಿ ಸಿಗಲಿದೆ ಉಚಿತ ವೈಫೈ

download

ಭಾರತೀಯ ರೈಲು ಪ್ರಯಾಣಿಕರಿಗೆ ರೈಲ್ವೆ ಇಲಾಖೆ ಹೊಸ ಸೌಲಭ್ಯ ನೀಡಲು ಮುಂದಾಗಿದೆ. ಹಳ್ಳಿಗಾಡು ಪ್ರದೇಶದ ಜನರನ್ನು ಗಮನದಲ್ಲಿಟ್ಟುಕೊಂಡು ರೈಲ್ವೆ ಇಲಾಖೆ ಈ ಸೌಲಭ್ಯ ನೀಡಲು ನಿರ್ಧರಿಸಿದೆ.

ಮೊಬೈಲ್ ಸಂಪರ್ಕವಿಲ್ಲದ ಪ್ರದೇಶದಲ್ಲಿ ವಾಸವಾಗಿರುವ ಜನರಿಗೆ ಸರ್ಕಾರಿ ಸೌಲಭ್ಯಗಳ ಬಗ್ಗೆ ಮಾಹಿತಿ ಸಿಗ್ತಾ ಇಲ್ಲ. ಅಲ್ಲದೆ ಅವರಿಗೆ ಆನ್ಲೈನ್ ಸೇವೆಗಳನ್ನು ಪಡೆಯಲು ಸಾಧ್ಯವಾಗ್ತಿಲ್ಲ. ಅವರನ್ನೂ ಹೊರ ಪ್ರಪಂಚಕ್ಕೆ ಪರಿಚಯಿಸಿ, ಸರ್ಕಾರಿ ಸೌಲಭ್ಯ, ಸೇವೆಗಳನ್ನು ಸುಲಭವಾಗಿ ಪಡೆಯುವಂತೆ ಮಾಡಲು ರೈಲ್ವೆ ಇಲಾಖೆ ಮುಂದಾಗಿದೆ.

ಹಾಗಾಗಿ ಹಳ್ಳಿಗಾಡಿನ 500 ರೈಲ್ವೆ ನಿಲ್ದಾಣಗಳಲ್ಲಿ ವೈಫೈ ಸೇವೆ ಒದಗಿಸಲು ನಿರ್ಧರಿಸಿದೆ. ಗೂಗಲ್ ಜೊತೆ ಕೈಜೋಡಿಸಿ 500 ರೈಲ್ವೆ ಕೇಂದ್ರಗಳಲ್ಲಿ ವೈಫೈ ಸೇವೆ ಒದಗಿಸಲು ಯೋಜನೆ ರೂಪಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...