alex Certify
ಕನ್ನಡ ದುನಿಯಾ       Mobile App
       

Kannada Duniya

ಎಸ್.ಬಿ.ಐ. ಮುಖ್ಯಸ್ಥೆಯ ಅಧಿಕಾರಾವಧಿ ವಿಸ್ತರಣೆಗೆ ಸರ್ಕಾರದ ಚಿಂತನೆ

Chairperson of State Bank of India (SBI), Arundhati Bhattacharya attends the Finance Minister's meeting with Chief Executives of Public Sector bank and Financial Institutions in New Delhi on October 22, 2013.   The meeting is to take stock of non-performing assets, credit growth and financial performance, include reviewing ways to cut down deteriorating asset quality, credit growth in the targeted sectors.  AFP PHOTO/RAVEENDRAN.        (Photo credit should read RAVEENDRAN/AFP/Getty Images)ಈ ತಿಂಗಳ ಅಂತ್ಯದಲ್ಲಿ ಅಧಿಕಾರಾವಧಿ ಪೂರ್ಣಗೊಳಿಸಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮುಖ್ಯಸ್ಥೆ ಅರುಂಧತಿ ಭಟ್ಟಾಚಾರ್ಯ ಅವರ ಅಧಿಕಾರಾವಧಿಯನ್ನು ಮುಂದಿನ ಒಂದು ವರ್ಷಗಳ ಕಾಲ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.

ಮೂರು ವರ್ಷಗಳ ಹಿಂದೆ ಅರುಂಧತಿ ಭಟ್ಟಾಚಾರ್ಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮುಖ್ಯಸ್ಥೆಯಾಗಿ ನೇಮಕಗೊಂಡಿದ್ದು, ಸಹವರ್ತಿ ಬ್ಯಾಂಕ್ ಗಳಾದ ಸ್ಟೇಟ್ ಬ್ಯಾಂಕ್ ಆಫ್ ಬಿಕಾನೀರ್ ಅಂಡ್ ಜೈಪುರ್, ಸ್ಟೇಟ್ ಬ್ಯಾಂಕ್ ಆಫ್ ಟ್ರಾವಂಕೂರ್, ಸ್ಟೇಟ್ ಬ್ಯಾಂಕ್ ಆಫ್ ಪಟಿಯಾಲ, ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಹೈದರಾಬಾದ್ ಅನ್ನು ವಿಲೀನಗೊಳಿಸುವ ಪ್ರಕ್ರಿಯೆ ನಡೆಯುತ್ತಿರುವ ಹಿನ್ನಲೆಯಲ್ಲಿ ಅರುಂಧತಿ ಭಟ್ಟಾಚಾರ್ಯ ಅವರ ಅಧಿಕಾರಾವಧಿಯನ್ನು ವಿಸ್ತರಣೆ ಮಾಡುವುದು ಸೂಕ್ತ ಎಂಬ ನಿರ್ಧಾರಕ್ಕೆ ಬರಲಾಗಿದೆ ಎನ್ನಲಾಗಿದೆ.

ಬ್ಯಾಂಕ್ ಬೋರ್ಡ್ ಬ್ಯೂರೋ (BBB) ಕೂಡಾ ಸರ್ಕಾರಕ್ಕೆ ಅರುಂಧತಿ ಭಟ್ಟಾಚಾರ್ಯ ಅಧಿಕಾರಾವಧಿ ವಿಸ್ತರಣೆ ಕುರಿತಂತೆ ಪೂರಕ ವರದಿ ನೀಡಿದೆ ಎನ್ನಲಾಗಿದ್ದು, ಕೆಲ ದಿನಗಳಲ್ಲಿ ಅವರ ಅಧಿಕಾರಾವಧಿಯನ್ನು ಒಂದು ವರ್ಷಗಳ ಕಾಲ ವಿಸ್ತರಿಸುವ ಆದೇಶ ಹೊರ ಬೀಳಲಿದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...