alex Certify
ಕನ್ನಡ ದುನಿಯಾ       Mobile App
       

Kannada Duniya

ವಾಹನ, ಮನೆ ಖರೀದಿಸಬೇಕೆಂದುಕೊಂಡವರಿಗೆ ಶಾಕಿಂಗ್ ನ್ಯೂಸ್

ನವದೆಹಲಿ: ಮಧ್ಯಮ ವರ್ಗದವರು ವಾಹನ, ಮನೆ ಖರೀದಿಸಲು ಸಾಲ ಮಾಡುವುದು ಸಾಮಾನ್ಯವಾಗಿದೆ. ಹೀಗೆ ಸಾಲ ಮಾಡಿ ಮನೆ, ವಾಹನ ಖರೀದಿಸಬೇಕೆಂದುಕೊಂಡವರಿಗೆ ಮತ್ತು ಸಾಲ ಪಡೆದವರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ.

ದೇಶದ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್.ಬಿ.ಐ.), ಪಂಜಾಬ್ ನ್ಯಾಷನಲ್ ಬ್ಯಾಂಕ್ ಸೇರಿದಂತೆ ಬಹುತೇಕ ಬ್ಯಾಂಕ್ ಗಳು ಸಾಲದ ಮೇಲಿನ ಬಡ್ಡಿದರವನ್ನು ಏರಿಕೆ ಮಾಡಿವೆ.

ಮಾರ್ಜಿನಲ್ ಕಾಸ್ಟ್ ಆಫ್ ಲೆಂಡಿಂಗ್ ರೇಟ್ ದರವನ್ನು 15 ಮೂಲಾಂಶದಿಂದ 20 ಮೂಲಾಂಶದಷ್ಟು ಏರಿಕೆ ಮಾಡಲಾಗಿದೆ. ಇದರಿಂದಾಗಿ ಗೃಹಸಾಲ, ವಾಹನ ಸಾಲ ಮತ್ತು ವೈಯಕ್ತಿಕ ಸಾಲಗಳ ಬಡ್ಡಿದರ ಹೆಚ್ಚಾಗಲಿದೆ. ಇದರೊಂದಿಗೆ ಇ.ಎಂ.ಐ. ಕೂಡ ಜಾಸ್ತಿಯಾಗಲಿದೆ.

ಭಾರತೀಯ ಸ್ಟೇಟ್ ಬ್ಯಾಂಕ್ ಶೇ. 7.95 ರಿಂದ ಶೇ. 8.15 ಕ್ಕೆ ಬಡ್ಡಿ ದರವನ್ನು ಏರಿಸಿದೆ. ವಂಚನೆಯ ಸುಳಿಗೆ ಸಿಲುಕಿರುವ ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಾಗೂ ಐ.ಸಿ.ಐ.ಸಿ.ಐ. ಬ್ಯಾಂಕ್ ಗಳು 15 ಮೂಲಾಂಶವನ್ನು ಏರಿಕೆ ಮಾಡಿವೆ. ಅದೇ ರೀತಿ ಕೋಟಕ್ ಮಹೀಂದ್ರಾ ಬ್ಯಾಂಕ್, ಹೆಚ್.ಡಿ.ಎಫ್.ಸಿ., ಎಕ್ಸಿಸ್ ಬ್ಯಾಂಕ್ ಗಳು ಜನವರಿಯಲ್ಲೇ ಮೂಲಾಂಶವನ್ನು ಏರಿಕೆ ಮಾಡಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...