alex Certify
ಕನ್ನಡ ದುನಿಯಾ       Mobile App
       

Kannada Duniya

ದಾಖಲೆ ಇಲ್ಲದೆ ಮಲ್ಯಗೆ ಸಾಲ ಕೊಟ್ಟ ಅಧಿಕಾರಿಗಳಿಗೆ ಸಂಕಷ್ಟ

MUMBAI, INIDA NOVEMBER 15: Vijay Mallya, Chairman of Kingfisher Airlines at press conference to announce the results at Regency Ballroom, Hyatt Regency, Andheri (E) on November 15, 2011 in Mumbai, India. (Photo by S Kumar/Mint via Getty Images)

ನವದೆಹಲಿ: ಅಸಲು, ಬಡ್ಡಿ ಸೇರಿದಂತೆ ಸುಮಾರು 9,000 ಕೋಟಿ ರೂಪಾಯಿ ಸಾಲವನ್ನು ವಿವಿಧ ಬ್ಯಾಂಕ್ ಗಳಿಗೆ ಕೊಡಬೇಕಿರುವ ಉದ್ಯಮಿ ವಿಜಯ್ ಮಲ್ಯ ವಿದೇಶದಲ್ಲಿ ನೆಲೆಸಿದ್ದಾರೆ.

ಮಲ್ಯ ಒಡೆತನದ ಕಿಂಗ್ ಫಿಶರ್ ಏರ್ ಲೈನ್ಸ್ ಗೆ 2007 ರಿಂದ 2010 ರ ಅವಧಿಯಲ್ಲಿ ವಿವಿಧ ರಾಷ್ಟ್ರೀಕೃತ ಬ್ಯಾಂಕ್ ಗಳಿಂದ ಸುಮಾರು 1,600 ಕೋಟಿ ರೂಪಾಯಿ ಸಾಲ ನೀಡಲಾಗಿದೆ. ಮೊದಲಿಗೆ ಕಿಂಗ್ ಫಿಶರ್ ಏರ್ ಲೈನ್ಸ್ ಗೆ ಸಾಲ ನೀಡಿದ್ದು, ಅದನ್ನು ತೀರಿಸದಿದ್ದರೂ, ಎರಡನೇ ಬಾರಿಗೆ ಸಾಲ ಕೊಡಲಾಗಿದೆ. ಹೀಗೆ ಸಾಲ ಕೊಡುವ ಸಂದರ್ಭದಲ್ಲಿ ದಾಖಲೆ ಇಲ್ಲದೇ ಸಾಲ ಕೊಟ್ಟಿರುವುದು ಬೆಳಕಿಗೆ ಬಂದಿದೆ. ಆ ಅವಧಿಯಲ್ಲಿ ಬ್ಯಾಂಕ್ ಅಧಿಕಾರಿಗಳಾಗಿದ್ದವರನ್ನು ತನಿಖೆಗೆ ಒಳಪಡಿಸಲಾಗುವುದು.

ಕೇಂದ್ರ ಸರ್ಕಾರದ ಕಾರ್ಪೋರೇಟ್ ಸಚಿವಾಲಯದ ತನಿಖಾ ಸಂಸ್ಥೆಯಿಂದ, ದಾಖಲೆ ಇಲ್ಲದೇ ಕಿಂಗ್ ಫಿಶರ್ ಏರ್ ಲೈನ್ಸ್ ಗೆ ಸಾಲ ನೀಡಿದ ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುವುದು. ಅನೇಕ ರಾಷ್ಟ್ರೀಕೃತ ಬ್ಯಾಂಕ್ ಗಳ ಮಾಜಿ ಮುಖ್ಯಸ್ಥರನ್ನು ತನಿಖೆಗೆ ಒಳಪಡಿಸಲಾಗುವುದು ಎಂದು ವರದಿಯಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...