alex Certify
ಕನ್ನಡ ದುನಿಯಾ       Mobile App
       

Kannada Duniya

ಪೊಲೀಸರಾಗಲು ಬಯಸಿದ್ದವರು ಮಾಡಿದ್ರು ‘ಪೋಲಿ’ ಕೆಲಸ

karimnagar-rape_650x400_71456627905

ಪೊಲೀಸ್ ಅಧಿಕಾರಿಗಳಾಗಬೇಕೆಂಬ ಕಾರಣಕ್ಕಾಗಿ ಕೋಚಿಂಗ್ ಪಡೆಯುತ್ತಿದ್ದ ಮೂವರು ಯುವಕರು ತಮ್ಮ ಸಹಪಾಠಿ ಯುವತಿ ಮೇಲೆ ಅತ್ಯಾಚಾರವೆಸಗಿ ಈ ದೃಶ್ಯಗಳನ್ನು ಸೆರೆ ಹಿಡಿದು ಬ್ಲಾಕ್ ಮೇಲ್ ಮಾಡುತ್ತಿದ್ದ ಘಟನೆ ತೆಲಂಗಾಣದಲ್ಲಿ ನಡೆದಿದೆ.

ತೆಲಂಗಾಣದ ಕರೀಂ ನಗರ ಜಿಲ್ಲೆಯಲ್ಲಿನ ಕೋಚಿಂಗ್ ಕ್ಲಾಸ್ ನಲ್ಲಿ ಜಿ. ಶ್ರೀನಿವಾಸ್, ಅಂಜಯ್ಯ ಹಾಗೂ ರಾಕೇಶ್ ಎಂಬ ಯುವಕರು ಪೊಲೀಸ್ ಅಧಿಕಾರಿಗಳಾಗಬೇಕೆಂಬ ಕಾರಣಕ್ಕೆ ತರಬೇತಿ ಪಡೆಯುತ್ತಿದ್ದರು. ಇದೇ ಉದ್ದೇಶಕ್ಕಾಗಿ 23 ವರ್ಷದ ಯುವತಿಯೂ ಕೋಚಿಂಗ್ ಕ್ಲಾಸ್ ಗೆ ಸೇರಿಕೊಂಡಿದ್ದು, ಮೂವರೂ ಆಕೆಯ ಸ್ನೇಹ ಸಂಪಾದಿಸಿದ್ದಾರೆ.

ಈ ಸ್ನೇಹವನ್ನು ದುರುಪಯೋಗಪಡಿಸಿಕೊಂಡ ಮೂವರು ಯುವಕರು ಆಕೆಯ ಮೇಲೆ ಅತ್ಯಾಚಾರವೆಸಗಿ ಆ ದೃಶ್ಯಗಳನ್ನು ಚಿತ್ರೀಕರಿಸಿಕೊಂಡಿದ್ದಾರೆ. ಬಳಿಕ ತಮ್ಮೊಂದಿಗೆ ಸಹಕರಿಸದಿದ್ದರೆ ಈ ವಿಡಿಯೋವನ್ನು ಸಾಮಾಜಿಕ ಜಾಲ ತಾಣದಲ್ಲಿ ಹಾಕುವುದಾಗಿ ಬೆದರಿಸಿ ನಿರಂತರವಾಗಿ ಆಕೆಯನ್ನು ಬಳಸಿಕೊಂಡಿದ್ದಾರೆ. ನೊಂದ ಯುವತಿ ತನ್ನ ಪೋಷಕರ ಬಳಿ ವಿಷಯ ತಿಳಿಸಿದ್ದು, ಮೂವರು ಯುವಕರನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ದೂರು ನೀಡಲಾಗಿದೆ. ಒದೆ ತಿಂದವರ ಪೈಕಿ ಇಬ್ಬರು ಇನ್ನೂ ಆಸ್ಪತ್ರೆಯಲ್ಲಿದ್ದು, ಮತ್ತೊಬ್ಬನನ್ನು ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...