alex Certify ಗಮನಿಸಿ: 2000 ರೂ. ನೋಟು ಬದಲಾವಣೆಗೆ ಇನ್ನೂ ಇದೆ ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ: 2000 ರೂ. ನೋಟು ಬದಲಾವಣೆಗೆ ಇನ್ನೂ ಇದೆ ಅವಕಾಶ

ನವದೆಹಲಿ: 2000 ರೂ. ಮುಖಬೆಲೆಯ ನೋಟುಗಳ ಬದಲಾವಣೆಗೆ ಅಥವಾ ಠೇವಣಿಗೆ ಬ್ಯಾಂಕುಗಳಲ್ಲಿ ಅವಕಾಶ ಇಲ್ಲ. ಒಂದು ವೇಳೆ ನಿಮ್ಮ ಬಳಿ ಅಂತಹ 2000 ರೂ. ನೋಟುಗಳಿದ್ದಲ್ಲಿ ಆರ್‌ಬಿಐ ಶಾಖೆಗಳಲ್ಲಿ ಬದಲಾವಣೆ ಮಾಡಿಕೊಳ್ಳಲು ಅವಕಾಶ ಇದೆ.

ದೇಶದೆಲ್ಲೆಡೆ ಆರ್‌ಬಿಐನ ಒಟ್ಟು 19 ಪ್ರಾದೇಶಿಕ ಕಚೇರಿಗಳಿವೆ. ಈ ಶಾಖೆಗಳಲ್ಲಿ ಎರಡು ಸಾವಿರ ರೂಪಾಯಿ ನೋಟುಗಳನ್ನು ವಿನಿಮಯ ಮಾಡಿಕೊಳ್ಳಬಹುದು ಅಥವಾ ಠೇವಣಿ ಮಾಡಬಹುದಾಗಿದೆ. ಆರ್‌ಬಿಐನ ಎಲ್ಲಾ ಶಾಖೆಗಳಲ್ಲಿ 2000 ರೂ. ನೋಟು ಬದಲಾವಣೆಗೆ ಅವಕಾಶ ಕಲ್ಪಿಸಲಾಗಿದೆ.

2016ರಲ್ಲಿ 1000 ರೂ. ಮತ್ತು 500 ರೂಪಾಯಿ ಮುಖಬೆಲೆಯ ನೋಟುಗಳನ್ನು ರದ್ದುಗೊಳಿಸಲಾಗಿತ್ತು. ಅವುಗಳ ಬದಲಿಗೆ 2000 ರೂ. ಮತ್ತು 500 ರೂಪಾಯಿ ಮುಖಬೆಲೆಯ ಹೊಸ ನೋಟುಗಳನ್ನು ಬಿಡುಗಡೆ ಮಾಡಲಾಗಿತ್ತು. ಈಗ 2000 ರೂ. ನೋಟುಗಳನ್ನು ಹಿಂಪಡೆಯಲಾಗಿದೆ. ಬ್ಯಾಂಕುಗಳಲ್ಲಿ ಹಳೆಯ ನೋಟುಗಳ ವಿನಿಮಯ ಅಥವಾ ಠೇವಣಿಗೆ ಅವಧಿ ಮುಕ್ತಾಯವಾಗಿದೆ. ಆರ್.ಬಿ.ಐ. ಶಾಖೆಗಳಲ್ಲಿ ಈ ನೋಟುಗಳನ್ನು ಬದಲಾವಣೆ ಮಾಡಿಕೊಳ್ಳಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...