alex Certify
ಕನ್ನಡ ದುನಿಯಾ       Mobile App
       

Kannada Duniya

ಆಧಾರ್ ಕಾರ್ಡ್ ಜೋಡಣೆಯಿಂದಾಗಿ ಬಯಲಾಗಿದೆ ಈ ‘ರಹಸ್ಯ’

ಹೈದರಾಬಾದ್: ಅನೇಕ ಯೋಜನೆ, ಸೇವೆಗಳಿಗೆ ಆಧಾರ್ ಕಾರ್ಡ್ ಕಡ್ಡಾಯ ಮಾಡಲಾಗಿದೆ. ಅದೇ ರೀತಿ ರೇಷನ್ ಕಾರ್ಡ್ ಗಳಿಗೆ ಆಧಾರ್ ಜೋಡಣೆ ಮಾಡಲಾಗ್ತಿದೆ.

ಆಧಾರ್ ಜೋಡಣೆ ಬಳಿಕ, ಬರೋಬ್ಬರಿ 3 ಕೋಟಿ ನಕಲಿ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ರಾಜ್ಯ ಸಚಿವ ಸಿ.ಆರ್. ಚೌಧರಿ ತಿಳಿಸಿದ್ದಾರೆ.

ಎನ್.ಡಿ.ಎ. ಸರ್ಕಾರ ಅಧಿಕಾರಕ್ಕೆ ಬಂದ 3 ವರ್ಷಗಳಲ್ಲಿ 3 ಕೋಟಿ ನಕಲಿ ರೇಷನ್ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ. ಇದರಿಂದಾಗಿ ಪ್ರತಿ ವರ್ಷ 17,000 ಕೋಟಿ ರೂ. ಉಳಿತಾಯವಾಗಿದೆ ಎಂದು ಹೇಳಿದ್ದಾರೆ.

ಪಡಿತರ ಚೀಟಿಗೆ ಆಧಾರ್ ಲಿಂಕ್ ಮಾಡಿರುವುದರಿಂದ ನಕಲಿ ಪಡಿತರ ಚೀಟಿಗಳು ಪತ್ತೆಯಾಗಿವೆ. ಸುಮಾರು 23 ಕೋಟಿ ರೇಷನ್ ಕಾರ್ಡ್ ಗಳಲ್ಲಿ ಶೇ. 82 ರಷ್ಟು ಕಾರ್ಡ್ ಗಳಿಗೆ ಆಧಾರ್ ಜೋಡಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ನಕಲಿ ಕಾರ್ಡ್ ಗಳನ್ನು ರದ್ದುಪಡಿಸಿರುವುದರಿಂದ ಅರ್ಹ ಫಲಾನುಭವಿಗಳಿಗೆ ಪಡಿತರವನ್ನು ತಲುಪಿಸಲು ಅನುಕೂಲವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...