alex Certify
ಕನ್ನಡ ದುನಿಯಾ       Mobile App
       

Kannada Duniya

ಮೊಬೈಲ್ ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ಮೊಬೈಲ್ ಬಳಕೆದಾರರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿಯನ್ನು ನೀಡಿದೆ. ಮೊಬೈಲ್ ಸಿಮ್ ಗೆ ಆಧಾರ್ ಕಡ್ಡಾಯವೇನಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಆಧಾರ್ ಹೊರತುಪಡಿಸಿ ಬೇರೆ ಗುರುತಿನ ದಾಖಲೆಗಳನ್ನು ಸ್ವೀಕರಿಸುವಂತೆ ಮೊಬೈಲ್ ಕಂಪನಿಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ. ಡ್ರೈವಿಂಗ್ ಲೈಸೆನ್ಸ್, ಪಾಸ್ ಪೋರ್ಟ್, ಮತದಾರರ ಗುರುತಿನ ಚೀಟಿ ಮೊದಲಾದ ಪರ್ಯಾಯ ಗುರುತಿನ ದಾಖಲೆಗಳನ್ನು ಕೂಡ ಸ್ವೀಕರಿಸುವಂತೆ ಮೊಬೈಲ್ ಕಂಪನಿಗಳಿಗೆ ಸೂಚಿಸಿದೆ.

ಆಧಾರ್ ಕುರಿತ ಅಂತಿಮ ವಿಚಾರಣೆವರೆಗೆ ಸಿಮ್ ಕಾರ್ಡ್ ಗಳನ್ನು ಪಡೆಯಲು ಆಧಾರ್ ಕಡ್ಡಾಯವೇನಲ್ಲ ಎಂದು ಸುಪ್ರೀಂ ಕೋರ್ಟ್ ಈಗಾಗಲೇ ಹೇಳಿದೆ. ಹೀಗಿದ್ದರೂ, ಆಧಾರ್ ಕಾರ್ಡ್ ಕಡ್ಡಾಯವೆನ್ನುವಂತೆ ಬಿಂಬಿಸಲಾಗಿತ್ತು. ಆದರೆ, ಕೇಂದ್ರ ಸರ್ಕಾರವೇ ಸ್ಪಷ್ಟನೆ ನೀಡಿದ್ದು, ಮೊಬೈಲ್ ಸಿಮ್ ಗಾಗಿ ಆಧಾರ್ ಕಡ್ಡಾಯವಲ್ಲ ಎಂದು ತಿಳಿಸಿದೆ.

ಆಧಾರ್ ಇಲ್ಲದೆಯೂ ಸಿಮ್ ಕಾರ್ಡ್ ವಿತರಿಸುವಂತೆ ಟೆಲಿಕಾಂ ಕಂಪನಿಗಳಿಗೆ ಸೂಚನೆ ನೀಡಲಾಗಿದೆ ಎಂದು ಟೆಲಿಕಾಂ ಇಲಾಖೆ ಕಾರ್ಯದರ್ಶಿ ಅರುಣ ಸುಂದರರಾಜನ್ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...