alex Certify
ಕನ್ನಡ ದುನಿಯಾ       Mobile App
       

Kannada Duniya

ಆಧಾರ್ ಕಾರ್ಡ್ ಮಾಡಿಸಿಲ್ಲವೇ? ಹಾಗಿದ್ರೆ ಇಲ್ಲಿದೆ ಮುಖ್ಯ ಮಾಹಿತಿ

ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳ ಕೆಲ ಸೌಲಭ್ಯಗಳನ್ನು ಪಡೆಯಲು ಆಧಾರ್ ಕಾರ್ಡ್ ಅವಶ್ಯಕ. ಹೀಗಾಗಿ ಆಧಾರ್ ಕಾರ್ಡ್ ಮಾಡಿಸಲು ಸಾರ್ವಜನಿಕರಿಗೆ ಅನುಕೂಲವಾಗುವಂತೆ ಈಗ ಬ್ಯಾಂಕ್ ಹಾಗೂ ಅಂಚೆ ಕಚೇರಿಗಳಲ್ಲಿಯೂ ಆಧಾರ್ ಕೇಂದ್ರಗಳನ್ನು ಆರಂಭಿಸಲಾಗಿದೆ.

ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಜಯ್ ಭೂಷಣ್ ಪಾಂಡೆ ಈ ವಿಚಾರವನ್ನು ತಿಳಿಸಿದ್ದು, ದೇಶದ ವಿವಿಧ ಬ್ಯಾಂಕ್ ಶಾಖೆಗಳು ಮತ್ತು ಅಂಚೆ ಕಚೇರಿಗಳಲ್ಲಿ ಒಟ್ಟು 18000 ಆಧಾರ್ ನೋಂದಣಿ ಕೇಂದ್ರಗಳನ್ನು ಆರಂಭಿಸಲಾಗಿದೆ ಎಂದಿದ್ದಾರೆ

10 ಶಾಖೆಗಳಿಗೆ ತಲಾ ಒಂದರಂತೆ ಆಧಾರ್ ಕೇಂದ್ರ ಸ್ಥಾಪಿಸಲು ಪ್ರಾಧಿಕಾರವು, ಖಾಸಗಿ ಮತ್ತು ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ ಮನವಿ ಮಾಡಿದ್ದು, ಈ ಹಿನ್ನೆಲೆಯಲ್ಲಿ ಆಧಾರ್ ನೋಂದಣಿ ಕೇಂದ್ರಗಳು ಆರಂಭವಾಗಿವೆ ಎಂದಿರುವ ಅವರು, ಬಾಕಿ ಇರುವ ಕೇಂದ್ರಗಳನ್ನು ಶೀಘ್ರದಲ್ಲೇ ಆರಂಭಿಸುವುದಾಗಿ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...