alex Certify
ಕನ್ನಡ ದುನಿಯಾ       Mobile App
       

Kannada Duniya

ಕೇಂದ್ರ ಸರ್ಕಾರಿ ನೌಕರರಿಗೆ ಕಾದಿದೆ ಡಬಲ್ ಶಾಕ್

ಕನಿಷ್ಟ ವೇತನ 26,000 ರೂಪಾಯಿಗೆ ಏರಿಕೆ ಆಗಲಿದೆ ಎಂಬ ನಿರೀಕ್ಷೆಯಲ್ಲಿದ್ದ ಕೇಂದ್ರ ಸರ್ಕಾರಿ ನೌಕರರಿಗೆ ನಿರಾಸೆ ಕಾದಿದೆ. ಯಾಕಂದ್ರೆ ವೇತನವನ್ನು 26,000ಕ್ಕೆ ಏರಿಸುವ ಯಾವುದೇ ಪ್ರಸ್ತಾಪ ಕೇಂದ್ರ ಸರ್ಕಾರದ ಮುಂದಿಲ್ಲ ಎಂದು 7ನೇ ವೇತನ ಆಯೋಗದ ಮೂಲಗಳು ತಿಳಿಸಿವೆ.

ಇದರ ಜೊತೆಜೊತೆಗೆ ಮತ್ತೊಂದು ಆಘಾತಕಾರಿ ಸುದ್ದಿಯನ್ನೂ ಸಚಿವ ಜಿತೇಂದ್ರ ಸಿಂಗ್ ಹೊರಹಾಕಿದ್ದಾರೆ. ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು ಹೆಚ್ಚಳ ಮಾಡುವ ಪ್ರಸ್ತಾಪ ಕೇಂದ್ರದ ಮುಂದಿಲ್ಲ ಅಂತಾ ಸ್ಪಷ್ಟಪಡಿಸಿದ್ದಾರೆ. ನಿವೃತ್ತಿ ವಯಸ್ಸನ್ನು 60 ರಿಂದ 62 ವರ್ಷಕ್ಕೆ ಏರಿಕೆ ಮಾಡಬೇಕೆಂಬ ಒತ್ತಾಯವಿತ್ತು.

ಕೇಂದ್ರ ಸರ್ಕಾರಿ ನೌಕರರಿಗೆ ಇದು ಡಬಲ್ ಶಾಕ್ ಅನ್ನೋದಂತೂ ಸತ್ಯ. ಕನಿಷ್ಟ ವೇತನ ಹೆಚ್ಚಳದ ನಿರೀಕ್ಷೆ ಇಟ್ಟುಕೊಂಡಿದ್ದವರಿಗೆ ಸಹ ನಿರಾಸೆ ಕಾದಿದೆ. ಸುಮಾರು 48.41 ಲಕ್ಷ ಉದ್ಯೋಗಿಗಳ ಮೇಲೆ ಇದು ಪರಿಣಾಮ ಬೀರಲಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...