alex Certify
ಕನ್ನಡ ದುನಿಯಾ       Mobile App
       

Kannada Duniya

ಸಿಬ್ಬಂದಿಗೆ ಖಡಕ್ ಸೂಚನೆ ನೀಡಿದ ಏರ್ ಇಂಡಿಯಾ

ಏರ್ ಇಂಡಿಯಾ ಆಡಳಿತ ಮಂಡಳಿ ವಿಮಾನದ ಸಿಬ್ಬಂದಿಗೆ ಖಡಕ್ ಸೂಚನೆ ನೀಡಿದೆ. ವಿಮಾನದ ಕ್ಯಾಬಿನ್ ನಲ್ಲಿ ನೃತ್ಯ ಮಾಡಿ ಸಾಮಾಜಿಕ ಜಾಲತಾಣಗಲ್ಲಿ ಪೋಸ್ಟ್ ಮಾಡಿದರೆ ಕಠಿಣ ಕ್ರಮ ಕೈಗೊಳ್ಳೋದಾಗಿ ಎಚ್ಚರಿಕೆ ನೀಡಿದೆ. ಇತ್ತೀಚೆಗೆ ವಿಮಾನದ ಸಿಬ್ಬಂದಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ವಿಡಿಯೋ ಒಂದು ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಈ ಸಂಬಂಧ ಇನ್ಮುಂದೆ ಇಂತಾ ವಿಡಿಯೋಗಳಿಗೆ ಆಸ್ಪದ ನೀಡಿದೆ ಇರೋದಕ್ಕೆ ಏರ್ ಇಂಡಿಯಾ ಆಡಳಿತ ಮಂಡಳಿ ನಿರ್ಧರಿಸಿದೆ.

ಸಮವಸ್ತ್ರಧಾರಿಗಳಾದ ಏರ್ ಇಂಡಿಯಾ ಸಿಬ್ಬಂದಿ ಕಿಕಿ ಡ್ಯಾನ್ಸ್ ಸೇರಿದಂತೆ ಹಲವು ರೀತಿಯ ನೃತ್ಯಗಳನ್ನ ಮಾಡಿರುವ ಕೆಲ ವಿಡಿಯೋಗಳು ಸಾಮಾಜಿಕ ಜಾಲತಾಣಗಲ್ಲಿ ವೈರಲ್ ಆಗಿದೆ. ಇದು ಸಂಸ್ಥೆಯ ಘನತೆ ಮತ್ತು ಉದ್ಯೋಗಿಗಳ ಘನತೆಗೆ ತಕ್ಕುದಾದದ್ದಲ್ಲ ಅಂತ ಏರ್ ಇಂಡಿಯಾ ಆಡಳಿತ ಮಂಡಳಿ ಅಭಿಪ್ರಾಯಪಟ್ಟಿದೆ.

ಈಗಾಗ್ಲೇ ಪೋಸ್ಟ್ ಮಾಡಿರುವ ಆ ವಿಡಿಯೋಗಳನ್ನ ಕೂಡ ಸಾಮಾಜಿಕ ಜಾಲತಾಣಗಳಿಂದ ಡಿಲೀಟ್ ಮಾಡುವಂತೆಯೂ ಸೂಚಿಸಲಾಗಿದೆ. ಇನ್ಮುಂದೆ ಸಾಮಾಜಿಕ ಜಾಲತಾಣದಲ್ಲಿ ದಾಖಲಾಗುವ ವಿಡಿಯೋಗಳಿಗೆ ಕಠಿಣ ಕ್ರಮ ಕೈಗೊಳ್ಳೋದಾಗಿ ಏರ್ ಇಂಡಿಯಾ ಸಿಬ್ಬಂದಿಗಳಿಗೆ ಸೂಚನೆ ನೀಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...