alex Certify
ಕನ್ನಡ ದುನಿಯಾ       Mobile App
       

Kannada Duniya

ವಾಹನ ಸವಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಕಾರು, ದ್ವಿಚಕ್ರ ವಾಹನಗಳಿಗೂ ಸ್ಪೀಡ್ ಗವರ್ನರ್ ಕಡ್ಡಾಯಗೊಳಿಸುವಂತೆ ಕೋರಿ, ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ದಕ್ಷಿಣ ಭಾರತ ಸಾರಿಗೆ ಪರಿಷತ್ ತೀರ್ಮಾನಿಸಿದೆ.

ರಸ್ತೆ ಅಪಘಾತಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಸ್ಪೀಡ್ ಗವರ್ನರ್ ಗಳನ್ನು ವಾಹನಗಳ ತಯಾರಿಕೆಯ ಹಂತದಲ್ಲೇ ಅಳವಡಿಸಲು ಕಾಯ್ದೆಗೆ ತಿದ್ದುಪಡಿ ತರುವಂತೆ ಕೋರಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಸರಕು ಸಾಗಣೆ, ಕಾರು, ಆಟೊ ಚಾಲಕರಿಗೆ ಕನಿಷ್ಠ ವಿದ್ಯಾರ್ಹತೆ ನಿಗದಿ ಮಾಡುವುದು. ಪ್ರವಾಸಿ ವಾಹನಗಳಿಗೆ ರಾಷ್ಟ್ರೀಯ ರಹದಾರಿ ಪರವಾನಿಗಿ ನೀಡುವುದು ಸೇರಿದಂತೆ ವಿವಿಧ ನಿರ್ಣಯಗಳನ್ನು ದಕ್ಷಿಣ ಭಾರತ ಸಾರಿಗೆ ಪರಿಷತ್ ಸಭೆಯಲ್ಲಿ ಕೈಗೊಳ್ಳಲಾಗಿದೆ.

ಕರ್ನಾಟಕ, ತಮಿಳುನಾಡು, ಗೋವಾ, ಕೇರಳ, ಸಾರಿಗೆ ಸಚಿವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಪರಿಷತ್ ಸಭೆ ನಡೆದಿದ್ದು, ಸಭೆಯ ಬಳಿಕ ಸಾರಿಗೆ ಸಚಿವ ಹೆಚ್.ಎಂ. ರೇವಣ್ಣ ಮಾಹಿತಿ ನೀಡಿ, ಕಾರು ಹಾಗೂ ದ್ವಿಚಕ್ರ ವಾಹನಗಳಿಗೆ ಸ್ಪೀಡ್ ಗವರ್ನರ್ ಕಡ್ಡಾಯಗೊಳಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...