alex Certify
ಕನ್ನಡ ದುನಿಯಾ       Mobile App
       

Kannada Duniya

ಶೀಘ್ರವೇ ಅಡಿಕೆಗೆ ಬೆಂಬಲ ಬೆಲೆ ನಿಗದಿ

areca

ಬೆಂಗಳೂರು: ಅಡಿಕೆಗೆ ಬೆಂಬಲ ಬೆಲೆ ನೀಡಲು ಕೇಂದ್ರ ಸರ್ಕಾರ ತೀರ್ಮಾನಿಸಿದ್ದು, ಶೀಘ್ರವೇ ಆದೇಶ ಹೊರ ಬೀಳಲಿದೆ. ಕೆಂಪು ಅಡಿಕೆಗೆ ಕ್ವಿಂಟಾಲ್ ಗೆ 40,000 ರೂ. ಹಾಗೂ ಬಿಳಿ ಅಡಿಕೆ (ಚಾಲಿ)ಗೆ 30,000 ರೂ. ನೀಡಲಾಗುವುದು.

ಕೇಂದ್ರ ವಾಣಿಜ್ಯ ಸಚಿವಾಲಯ ಕೆಂಪು ಅಡಿಕೆಗೆ ಕ್ವಿಂಟಾಲ್ ಗೆ 40,000 ರೂ ಹಾಗೂ ಬಿಳಿ ಅಡಕೆ (ಚಾಲಿ)ಗೆ 30,000 ರೂ.ನೀಡಲು ಒಪ್ಪಿದ್ದು, ಶೀಘ್ರವೇ ಅಧಿಕೃತ ಘೋಷಣೆ ಹೊರ ಬೀಳಲಿದೆ ಎಂದು ಲೋಕಸಭಾ ಸದಸ್ಯ ಹಾಗೂ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಬಿ.ಜೆ.ಪಿ. ನಿಯೋಗದಿಂದ ಇತ್ತೀಚೆಗೆ ಕೇಂದ್ರ ವಾಣಿಜ್ಯ ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದು, ಅವರು ಈ ಬಗ್ಗೆ ಭರವಸೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ಮಾರುಕಟ್ಟೆಯಲ್ಲಿ ಅಡಿಕೆ ಬೆಲೆ ತೀವ್ರವಾಗಿ ಕುಸಿದಿರುವುದರಿಂದ ಅಡಿಕೆ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ಬೆಂಬಲ ಬೆಲೆ ನಿಗದಿ ಮಾಡಬೇಕೆಂದು ಬಿ.ಜೆ.ಪಿ. ನಿಯೋಗದಿಂದ ಮನವಿ ಮಾಡಲಾಗಿತ್ತು. ವಿದೇಶದ ಅಡಿಕೆ ಆಮದಿನಿಂದ ಆಗುವ ತೊಂದರೆ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದು, ಸಚಿವರು ಸ್ಪಂದಿಸುವ ಭರವಸೆ ನೀಡಿದ್ದಾರೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...