alex Certify
ಕನ್ನಡ ದುನಿಯಾ       Mobile App
       

Kannada Duniya

ತೆಂಗು, ಅಡಕೆ ಬೆಲೆ: ಪ್ರಧಾನಿ ಭೇಟಿಗೆ ತೀರ್ಮಾನ

ARECANUT

ಬೆಂಗಳೂರು: ಅಡಕೆ ಮತ್ತು ತೆಂಗು ಬೆಳೆಗಾರರ ಸಮಸ್ಯೆ ಕುರಿತಾಗಿ, ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಸರ್ವಪಕ್ಷ ಮುಖಂಡರು, ರೈತಪ್ರತಿನಿಧಿಗಳ ಸಭೆ ನಡೆದಿದ್ದು, ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಡಲು ತೀರ್ಮಾನಿಸಲಾಗಿದೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ಈ ಕುರಿತು ಮನವಿ ಮಾಡಲಾಗುವುದು. ಅದಕ್ಕಿಂತ ಮೊದಲು ಕೇಂದ್ರ ಸಂಪುಟ ಸಭೆಯಲ್ಲಿ ಈ ಕುರಿತಂತೆ ತೀರ್ಮಾನ ಕೈಗೊಳ್ಳುವ ನಿರೀಕ್ಷೆ ಇದೆ ಎನ್ನಲಾಗಿದೆ. ಈ ನಡುವೆ ಕೇಂದ್ರ ಸರ್ಕಾರ ರಾಜ್ಯದಿಂದ ಅಡಕೆ ಖರೀದಿಸಲು ತೀರ್ಮಾನಿಸಿದೆ. ಆದರೆ. ಅಡಕೆಯನ್ನು ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ 300 ರೂ.ನಿಂದ 400 ರೂ.ವರೆಗೆ ಖರೀದಿಸಬೇಕೆಂಬ ಸಲಹೆ ಬಗ್ಗೆ ಚರ್ಚೆ ನಡೆಸಿದೆ ಎಂದು ಹೇಳಲಾಗಿದೆ.

40 ಸಾವಿರ ಟನ್ ಅಡಕೆ ಖರೀದಿಸಬೇಕೆಂದು ರಾಜ್ಯ ಸರ್ಕಾರ ಹೇಳಿದ್ದು, ಈ ಕುರಿತಾಗಿ ಚರ್ಚೆ ನಡೆಸಲು ಕೇಂದ್ರ ಕೃಷಿ ಸಚಿವಾಲಯ ಮುಂದಾಗಿದೆ. 2015-16ನೇ ಸಾಲಿನಲ್ಲಿ 4.5 ಲಕ್ಷ ಟನ್ ಅಡಕೆ ಉತ್ಪಾದನೆ ಆಗಿದೆ ಎಂದು ಹೇಳಲಾಗಿದ್ದು, ಈ ಬಗ್ಗೆ ವಿಸ್ತೃತ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುವ ನಿರೀಕ್ಷೆ ಇದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...