alex Certify
ಕನ್ನಡ ದುನಿಯಾ       Mobile App
       

Kannada Duniya

ಕ್ಯಾಶ್ ಲೆಸ್ ವ್ಯವಹಾರ ಮಾಡುವವರಿಗೆ ಇಲ್ಲಿದೆ ಖುಷಿ ಸುದ್ದಿ

ನವದೆಹಲಿ: ಕೇಂದ್ರ ಸರ್ಕಾರ ನೋಟ್ ಬ್ಯಾನ್ ಮಾಡಿದ ನಂತರದಲ್ಲಿ ನಗದು ರಹಿತ ವಹಿವಾಟಿಗೆ ಉತ್ತೇಜನ ನೀಡಿದ್ದರೂ, ನಿರೀಕ್ಷಿತ ಪ್ರಮಾಣದಲ್ಲಿ ಜನ ಆಸಕ್ತಿ ತೋರುತ್ತಿಲ್ಲ.

ಮಹಾನಗರಗಳನ್ನು ಹೊರತುಪಡಿಸಿ ಸಣ್ಣ ನಗರ, ಪಟ್ಟಣ, ಗ್ರಾಮಗಳಲ್ಲಿ ನಗದುರಹಿತ ವಹಿವಾಟು ನಡೆಯುತ್ತಿಲ್ಲ. ಸ್ವೈಪಿಂಗ್ ಮಷಿನ್ ಇನ್ನೂ ಸಣ್ಣ ಮತ್ತು ಚಿಲ್ಲರೆ ವರ್ತಕರನ್ನು ತಲುಪಿಲ್ಲ. ಇವೇ ಮೊದಲಾದ ಕಾರಣಗಳಿಂದ ಬಜೆಟ್ ನಲ್ಲಿ ನಗದು ರಹಿತ ವಹಿವಾಟಿಗೆ ಉತ್ತೇಜನ ನೀಡುವ ಸಾಧ್ಯತೆ ಇದೆ.

ನಗದು ರಹಿತ ವಹಿವಾಟು ನಡೆಸುವವರಿಗೆ ತೆರಿಗೆ ವಿನಾಯಿತಿ ನೀಡಲಾಗುತ್ತದೆ. ಬಜೆಟ್ ನಲ್ಲಿ ತೆರಿಗೆ ವಿನಾಯಿತಿ ನೀಡುವ ಜೊತೆಗೆ, ಸ್ವೈಪಿಂಗ್ ಮಷಿನ್ ಗಳಿಗೂ ವಿನಾಯಿತಿ ನೀಡಲಾಗುವುದು. ಗ್ರಾಮಾಂತರ ಪ್ರದೇಶದ ಸಣ್ಣ ಮತ್ತು ಚಿಲ್ಲರೆ ವರ್ತಕರಿಗೆ ಸ್ವೈಪಿಂಗ್ ಮಷಿನ್ ಗಳನ್ನು ಉಚಿತವಾಗಿ ಅಥವಾ ಕಡಿಮೆ ದರದಲ್ಲಿ ನೀಡುವ ಕುರಿತೂ ಚಿಂತನೆ ನಡೆಸಲಾಗಿದೆ.

ಫೆಬ್ರವರಿ 1 ರಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಬಜೆಟ್ ಮಂಡಿಸಲಿದ್ದು, ಕ್ಯಾಶ್ ಲೆಸ್ ವ್ಯವಹಾರಕ್ಕೆ ಉತ್ತೇಜನ ನೀಡಲು ತೆರಿಗೆ ವಿನಾಯಿತಿ ನೀಡಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...