alex Certify
ಕನ್ನಡ ದುನಿಯಾ       Mobile App
       

Kannada Duniya

ಬ್ಯಾಂಕ್ ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದ ಜೇಟ್ಲಿ

ನವದೆಹಲಿ: ಹಣಕಾಸು ಪರಿಹಾರ ಮತ್ತು ಠೇವಣಿ ವಿಮೆ ವಿಧೇಯಕದಲ್ಲಿನ(FRDI) ಬೇಲ್ ಇನ್ ಪ್ರಸ್ತಾವನೆ ಕುರಿತಾಗಿ ಸಾರ್ವಜನಿಕ ವಲಯದಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಬ್ಯಾಂಕ್ ದಿವಾಳಿ ಅಥವಾ ನಷ್ಟ ಹೊಂದಿದ ಸಂದರ್ಭದಲ್ಲಿ ಗ್ರಾಹಕರ ಠೇವಣಿ ಹಣವನ್ನು ಬಳಸಿಕೊಳ್ಳಲು ವಿಧೇಯಕದ ಪ್ರಸ್ತಾವನೆಯಲ್ಲಿ ಅವಕಾಶ ನೀಡಲಾಗಿದೆ. ಇದನ್ನು ತೆಗೆದು ಹಾಕಬೇಕೆಂಬುದು ಗ್ರಾಹಕರ ಒತ್ತಡವಾಗಿದೆ.

ಈ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಕೇಂದ್ರ ಹಣಕಾಸು ಖಾತೆ ಸಚಿವ ಅರುಣ್ ಜೇಟ್ಲಿ, ಬ್ಯಾಂಕ್ ಮತ್ತು ಹಣಕಾಸು ಸಂಸ್ಥೆಗಳ ಗ್ರಾಹಕರ ಠೇವಣಿಗೆ ಸರ್ಕಾರದಿಂದ ಸಂಪೂರ್ಣ ಭದ್ರತೆಯನ್ನು ಒದಗಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಹಣಕಾಸು ಪರಿಹಾರ ಮತ್ತು ಠೇವಣಿ ವಿಮೆ ವಿಧೇಯಕದಲ್ಲಿನ ಬೇಲ್ ಇನ್ ಪ್ರಸ್ತಾವನೆಯನ್ನು ಅಗತ್ಯಬಿದ್ದರೆ, ಕೈಬಿಡಲಾಗುವುದು ಎಂದು ತಿಳಿಸಿದ್ದಾರೆ.

ಸಾರ್ವಜನಿಕ ವಲಯದ ಬ್ಯಾಂಕ್ ಗಳಿಗೆ 2.11 ಲಕ್ಷ ಕೋಟಿ ರೂ. ಬಂಡವಾಳವನ್ನು ಕೇಂದ್ರ ಸರ್ಕಾರ ಮರುಪೂರಣ ಮಾಡುವುದರಿಂದ ಬ್ಯಾಂಕ್ ಗಳು ನಷ್ಟಕ್ಕೆ ಒಳಗಾಗುವುದಿಲ್ಲ. ಸದೃಢಗೊಳ್ಳಲಿವೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಒಂದು ವೇಳೆ ಬ್ಯಾಂಕ್ ನಷ್ಟದ ಹಾದಿಗೆ ಇಳಿದರೆ, ಗ್ರಾಹಕರ ಠೇವಣಿಗಳಿಗೆ ಸಂಪೂರ್ಣ ರಕ್ಷಣೆ ಒದಗಿಸಲು ಸರ್ಕಾರ ಸಿದ್ಧವಿದೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಗುಜರಾತ್ ಫಲಿತಾಂಶ ಕರ್ನಾಟಕ ವಿಧಾನಸಭಾ ಚುನಾವಣೆ ಮೇಲೆ ಪರಿಣಾಮ ಬೀರಲಿದೆಯೇ...?

    View Results

    Loading ... Loading ...