alex Certify
ಕನ್ನಡ ದುನಿಯಾ       Mobile App
       

Kannada Duniya

ವಾಹನ ಮಾಲೀಕರಿಗೆ ಶಾಕಿಂಗ್ ಸುದ್ದಿ ಕೊಟ್ಟ ವಿತ್ತ ಸಚಿವ

ಅಂತರಾಷ್ಟ್ರೀಯ ಮಾರುಕಟ್ಟೆಗನುಗುಣವಾಗಿ ಭಾರತೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಪ್ರತಿ ನಿತ್ಯ ಏರಿಕೆ-ಇಳಿಕೆಯಾಗುತ್ತಿದ್ದು, ತೈಲ ದರವನ್ನು ಜಿ.ಎಸ್.ಟಿ. ವ್ಯಾಪ್ತಿಗೊಳಪಡಿಸಿದರೆ ವಾಹನ ಮಾಲೀಕರ ಹೊರೆ ಕಡಿಮೆಯಾಗಲಿದೆ.

ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್, ಪೆಟ್ರೋಲ್ ಡೀಸೆಲ್ ಜಿ.ಎಸ್.ಟಿ. ವ್ಯಾಪ್ತಿಗೆ ತರಲು ಪ್ರಯತ್ನಗಳು ನಡೆಯುತ್ತಿದ್ದು, ಶೀಘ್ರದಲ್ಲೇ ಇದು ಜಾರಿಗೆ ಬರುವ ಸಾಧ್ಯತೆ ಇದೆ ಎಂದು ಹೇಳಿದ್ದರು. ಆದರೆ ಹಣಕಾಸು ಸಚಿವ ಅರುಣ್ ಜೇಟ್ಲಿ ನಿರಾಶಾದಾಯಕ ಸುದ್ದಿ ನೀಡಿದ್ದಾರೆ.

ದೇಶದ ನಾಗರಿಕರು ತಾವು ಬಾಕಿ ಉಳಿಸಿಕೊಂಡಿರುವ ವಿವಿಧ ತೆರಿಗೆಯನ್ನು ಪ್ರಾಮಾಣಿಕವಾಗಿ ಪಾವತಿಸಿದರೆ, ಸರ್ಕಾರಗಳು ಪೆಟ್ರೋಲ್ ಮತ್ತು ಡೀಸೆಲ್ ಆದಾಯದ ಮೇಲೆ ಅವಲಂಬಿತವಾಗಿರುವುದನ್ನು ತಪ್ಪಿಸಬಹುದಾಗಿದೆ ಎಂದು ಹೇಳುವ ಮೂಲಕ ಸದ್ಯಕ್ಕೆ ತೈಲೋತ್ಪನ್ನಗಳ ಮೇಲಿನ ಸುಂಕ ಕಡಿತಗೊಳಿಸುವ ಸಾಧ್ಯತೆಗಳನ್ನು ತಳ್ಳಿ ಹಾಕಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...