alex Certify
ಕನ್ನಡ ದುನಿಯಾ       Mobile App
       

Kannada Duniya

ತೆರಿಗೆದಾರರಿಗೆ ಶುಭಸುದ್ದಿ ನೀಡಿದ ಅರುಣ್ ಜೇಟ್ಲಿ

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ(ಜಿ.ಎಸ್.ಟಿ.) ಜಾರಿಯಾಗಿ ಅಲ್ಪಾವಧಿಯಲ್ಲಿಯೇ ಸ್ಥಿರತೆ ಹಾದಿಗೆ ಮರಳಿರುವುದರಿಂದ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ತೆರಿಗೆ ಕಡಿತದ ಸುಳಿವು ನೀಡಿದ್ದಾರೆ.

ಅಂತರರಾಷ್ಟ್ರೀಯ ಕಸ್ಟಮ್ಸ್ ದಿನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜಿ.ಎಸ್.ಟಿ. ಸ್ಥಿರತೆಗೆ ಮರಳಿರುವುದರಿಂದ ಮುಂದಿನ ದಿನಗಳಲ್ಲಿ ತೆರಿಗೆದಾರರ ವ್ಯಾಪ್ತಿಯನ್ನು ವಿಸ್ತರಿಸಲು ಹಾಗೂ ತೆರಿಗೆ ದರಗಳನ್ನು ಇಳಿಸಲು ಅನುಕೂಲವಾಗುತ್ತದೆ ಎಂದು ಹೇಳಿದ್ದಾರೆ.

ಜಿ.ಎಸ್.ಟಿ. ಜಾರಿಯಾದ ಬಳಿಕ ಪರೋಕ್ಷ ತೆರಿಗೆ ವ್ಯವಸ್ಥೆಯಲ್ಲಿ ಬದಲಾವಣೆ ಆಗಿದೆ. ಬೇರೆ ದೇಶಗಳಿಗೆ ಹೋಲಿಸಿದಲ್ಲಿ ದೇಶದಲ್ಲಿ ಕಡಿಮೆ ಅವಧಿಯಲ್ಲಿಯೇ ಜಿ.ಎಸ್.ಟಿ. ವ್ಯವಸ್ಥೆ ಸ್ಥಿರತೆ ಹಾದಿಗೆ ಮರಳಿದೆ. ದೇಶದ ಆರ್ಥಿಕ ವ್ಯವಸ್ಥೆಯು ಹಲವು ರೀತಿಯ ಬದಲಾವಣೆಗಳಿಗೆ ತೆರೆದುಕೊಂಡಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...