alex Certify
ಕನ್ನಡ ದುನಿಯಾ       Mobile App
       

Kannada Duniya

ಬಜೆಟ್ ಮಂಡನೆ ವೇಳೆ ಸಂಪ್ರದಾಯ ಮುರಿಯಲಿದ್ದರಾ ಅರುಣ್ ಜೇಟ್ಲಿ…?

ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಇಂದು ಎನ್ ಡಿ ಎ ಸರ್ಕಾರದ 5ನೇ ಬಜೆಟ್ ಮಂಡಿಸುತ್ತಿದ್ದಾರೆ. ಈ ಬಾರಿ ಸಂಪ್ರದಾಯ ಮೀರಿ ಜೇಟ್ಲಿ ಬಜೆಟ್ ಅನ್ನು ಹಿಂದಿಯಲ್ಲಿ ಪ್ರಸ್ತುತಪಡಿಸಲಿದ್ದಾರಂತೆ. ಗ್ರಾಮೀಣ ಪ್ರದೇಶದ ಜನರು ಕೂಡ ಬಜೆಟ್ ಬಗ್ಗೆ ತಿಳಿದುಕೊಳ್ಳಲು ಅನುಕೂಲವಾಗಲಿ ಅನ್ನೋದು ಅವರ ಉದ್ದೇಶ.

ಈ ರೀತಿ ಮಾಡಿದರೆ ಅರುಣ್ ಜೇಟ್ಲಿ ಸ್ವಾತಂತ್ರ್ಯಾ ನಂತರ ಭಾರತದಲ್ಲಿ ಮೊಟ್ಟ ಮೊದಲ ಬಾರಿಗೆ ಹಿಂದಿಯಲ್ಲಿ ಬಜೆಟ್ ಮಂಡನೆ ಮಾಡಿದ ವಿತ್ತ ಸಚಿವ ಎನಿಸಿಕೊಳ್ಳಲಿದ್ದಾರೆ. ಅಷ್ಟೇ ಅಲ್ಲ ಈ ಬಜೆಟ್ ಆಮ್ ಆದ್ಮಿಗಳಿಗಾಗಿಯೇ ಇರುವ ಆಮ್ ಬಜೆಟ್ ಎನಿಸಿಕೊಳ್ಳಲಿದೆ.

ಕೃಷಿ, ನಿರುದ್ಯೋಗ ನಿವಾರಣೆ, ಮೂಲ ಸೌಕರ್ಯ, ಆರ್ಥಿಕ ಪ್ರಗತಿಗೆ ಬಜೆಟ್ ನಲ್ಲಿ ಮೋದಿ ಸರ್ಕಾರ ಹೆಚ್ಚಿನ ಒತ್ತು ಕೊಡುವ ಸಾಧ್ಯತೆ ಇದೆ. 8 ರಾಜ್ಯಗಳ ವಿಧಾನಸಭಾ ಚುನಾವಣೆ ಹಾಗೂ ಮುಂದಿನ ವರ್ಷ ನಡೆಯಲಿರೋ ಲೋಕಸಭಾ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ಜನಪ್ರಿಯ ಬಜೆಟ್ ಮಂಡನೆ ಮಾಡಲು ಸರ್ಕಾರ ಸಿದ್ಧತೆ ಮಾಡಿಕೊಂಡಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...