alex Certify
ಕನ್ನಡ ದುನಿಯಾ       Mobile App
       

Kannada Duniya

ಬ್ಯಾಂಕ್ ಗ್ರಾಹಕರಿಗೊಂದು ಮುಖ್ಯ ಮಾಹಿತಿ

ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬ್ಯಾಂಕ್ ನೌಕರರು ಮೇ. 30 ಹಾಗೂ 31ರಂದು ಎರಡು ದಿನಗಳ ಕಾಲ ಮುಷ್ಕರ ನಡೆಸಲು ಮುಂದಾಗಿದ್ದು, ಇದರಿಂದಾಗಿ ಬ್ಯಾಂಕ್ ವ್ಯವಹಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.

ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ನೌಕರರು ಆಡಳಿತ ಮಂಡಳಿಯ ಮುಂದಿಟ್ಟಿದ್ದು, ಈಡೇರಿಸದಿದ್ದಲ್ಲಿ 10 ಲಕ್ಷಕ್ಕೂ ಅಧಿಕ ಬ್ಯಾಂಕ್ ನೌಕರರು ಮುಷ್ಕರ ನಡೆಸಲು ಮುಂದಾಗಿದ್ದಾರೆ.

ಇದರಿಂದಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಬರೋಡ, ಕೆನರಾ ಬ್ಯಾಂಕ್, ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ಸೇರಿದಂತೆ ವಿವಿಧ ಬ್ಯಾಂಕ್ ಗಳ ಬ್ಯಾಂಕಿಂಗ್ ಸೇವೆಯಲ್ಲಿ ವ್ಯತ್ಯಯವಾಗಲಿದೆ ಎಂದು ಹೇಳಲಾಗಿದೆ.

ಬ್ಯಾಂಕ್ ಆಡಳಿತ ಮಂಡಳಿಗಳು ತಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಮೇ 30ರ ಬೆಳಗ್ಗೆ 6 ಗಂಟೆಯಿಂದಲೇ ಮುಷ್ಕರ ಆರಂಭಿಸಲು ಯುನೈಟೆಡ್ ಬ್ಯಾಂಕ್ ಯೂನಿಯನ್ಸ್ ಸೇರಿದಂತೆ ವಿವಿಧ ಸಂಘಟನೆಗಳು ನಿರ್ಧರಿಸಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...