alex Certify
ಕನ್ನಡ ದುನಿಯಾ       Mobile App
       

Kannada Duniya

ಬ್ಯಾಂಕ್ ಗ್ರಾಹಕರಿಗೆ ಇಲ್ಲಿದೆ ಗುಡ್ ನ್ಯೂಸ್….

ಬೆಂಗಳೂರು: ಹಿರಿಯ ನಾಗರಿಕರು ಮತ್ತು ವಿಕಲಚೇತನರ ಮನೆ ಬಾಗಿಲಿಗೆ ಬ್ಯಾಂಕ್ ಸೌಲಭ್ಯ ಕಲ್ಪಿಸುವಂತೆ, ರಾಜ್ಯ ಬ್ಯಾಂಕರ್ಸ್ ಸಮಿತಿ ಸಂಚಾಲಕ, ಸಿಂಡಿಕೇಟ್ ಬ್ಯಾಂಕ್ ಕಾರ್ಯನಿರ್ವಾಹಕ ನಿರ್ದೇಶಕರಾದ ಮಲ್ಲಿಕಾರ್ಜುನ ರಾವ್ ಸೂಚಿಸಿದ್ದಾರೆ.

ಬ್ಯಾಂಕರ್ಸ್ ಸಮಿತಿಯ ಸಭೆಯಲ್ಲಿ ಅವರು ಮಾತನಾಡಿ, ಭಾರತೀಯ ರಿಸರ್ವ್ ಬ್ಯಾಂಕ್(ಆರ್.ಬಿ.ಐ.) ಸೂಚನೆಯಂತೆ ಹಿರಿಯ ನಾಗರಿಕರು ಮತ್ತು ವಿಕಲಚೇತನರ ಮನೆ ಬಾಗಿಲಿಗೆ ಬ್ಯಾಂಕ್ ಸೌಲಭ್ಯ ತಲುಪಿಸಬೇಕೆಂದು ಹೇಳಿದ್ದಾರೆ.

ವಾಣಿಜ್ಯ ಬ್ಯಾಂಕ್ ಗಳಲ್ಲಿ ಆಧಾರ್ ನೋಂದಣಿ ಕೇಂದ್ರ ಆರಂಭಿಸಲು ಆರ್ಥಿಕ ಸೇವೆಗಳ ಇಲಾಖೆ ಸೂಚಿಸಿದೆ. ರಾಜ್ಯದಲ್ಲಿ 18 ಬ್ಯಾಂಕ್ ಗಳು 175 ಆಧಾರ್ ನೋಂದಣಿ ಕೇಂದ್ರಗಳನ್ನು ಆರಂಭಿಸಿವೆ. 23 ಬ್ಯಾಂಕ್ ಗಳು ಒಟ್ಟು 653 ಆಧಾರ್ ನೋಂದಣಿ ಕೇಂದ್ರಗಳನ್ನು ಆರಂಭಿಸಬೇಕಿದೆ ಎಂದು ತಿಳಿಸಿದ್ದಾರೆ.

ಸಾಲ ವಸೂಲಿಗೆ ಕ್ರಮ ಕೈಗೊಳ್ಳಬೇಕು. ಸರ್ಕಾರದ ಪ್ರಾಯೋಜಿತ ಯೋಜನೆಗಳ ಸಾಲ ಮರು ಪಾವತಿಗೆ ಇಲಾಖೆಗಳ ಸಹಕಾರ ಬೇಕಿದೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...