alex Certify
ಕನ್ನಡ ದುನಿಯಾ       Mobile App
       

Kannada Duniya

ಇಲ್ಲಿದೆ ನಾಣ್ಯಗಳ ಕುರಿತಾದ ಇಂಟ್ರೆಸ್ಟಿಂಗ್ ಸುದ್ದಿ…!

ಕೋಲ್ಕತ್ತಾ: ಭಾರತೀಯ ರಿಸರ್ವ್ ಬ್ಯಾಂಕ್(ಆರ್.ಬಿ.ಐ.) ಮಾರ್ಗದರ್ಶಿ ಸೂತ್ರಗಳ ಪ್ರಕಾರ ಯಾವುದೇ ನಾಣ್ಯಗಳನ್ನು ನಿರಾಕರಿಸುವಂತಿಲ್ಲ. ಹೀಗಿದ್ದರೂ, ಅನೇಕ ಬ್ಯಾಂಕ್ ಗಳಲ್ಲಿ ನಾಣ್ಯಗಳನ್ನು ಸ್ವೀಕರಿಸಲು ಹಿಂದೇಟು ಹಾಕ್ತಾರೆ.

10 ರೂ. ಕಾಯಿನ್ ರದ್ದಾಗಿದೆ ಎಂಬ ಸುದ್ದಿ ಹರಡಿ ಅನೇಕರು ಸ್ವೀಕರಿಸಲು ನಿರಾಕರಿಸಿದ್ದು, ಹಲವಾರು ಸಲ ಸ್ಪಷ್ಟನೆ ನೀಡಲಾಗಿದೆ. ನಾಣ್ಯದ ವಿಚಾರಕ್ಕೆ ಬ್ಯಾಂಕ್ ಮ್ಯಾನೇಜರ್ ಒಬ್ಬರಿಗೆ ಥಳಿಸಿದ ಘಟನೆ ಪಶ್ಚಿಮ ಬಂಗಾಳದ ಭೀರ್ ಭೂಮ್ ಜಿಲ್ಲೆಯಲ್ಲಿ ನಡೆದಿದೆ.

ಸೌರಿಯ UCO ಬ್ಯಾಂಕ್ ಶಾಖೆಯಲ್ಲಿ ಗ್ರಾಹಕರೊಬ್ಬರು ನಾಣ್ಯಗಳನ್ನು ತಂದು ಬ್ಯಾಂಕ್ ಸಿಬ್ಬಂದಿಗೆ ಕೊಟ್ಟಿದ್ದು, ಅವುಗಳನ್ನು ಸ್ವೀಕರಿಸಲು ಬ್ಯಾಂಕ್ ಸಿಬ್ಬಂದಿ ನಿರಾಕರಿಸಿದ್ದಾರೆ. ಕಾರಣ ಕೇಳಿದಾಗ, ಇನ್ನೊಂದು ದಿನ ತರುವಂತೆ ಉಡಾಫೆಯಿಂದ ಉತ್ತರಿಸಿದ್ದಾರೆ.

ಸರಿಯಾದ ಮಾಹಿತಿ ನೀಡದೇ, ನಾಣ್ಯಗಳನ್ನೂ ಕೂಡ ಸ್ವೀಕರಿಸಲು ಬ್ಯಾಂಕ್ ಸಿಬ್ಬಂದಿ ಉಡಾಫೆಯಿಂದ ವರ್ತಿಸಿದ್ದರಿಂದ ಆಕ್ರೋಶಗೊಂಡ ಗ್ರಾಹಕರು ಬ್ಯಾಂಕ್ ಮ್ಯಾನೇಜರ್ ಸುಭಾದಿಪ್ ಮಂಡಲ್ ಅವರ ಬಳಿ ದೂರಿದ್ದಾರೆ. ಅವರು ಕೂಡ ನಾಣ್ಯ ಸ್ವೀಕರಿಸುವುದಿಲ್ಲ ಎಂದು ಹೇಳಿದ್ದರಿಂದ ಆಕ್ರೋಶಗೊಂಡ ಜನ ಬ್ಯಾಂಕ್ ಮ್ಯಾನೇಜರ್ ಅವರನ್ನು ಥಳಿಸಿದ್ದಾರೆ. ಸಿಬ್ಬಂದಿ ಮೇಲೆಯೂ ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡಿದ ಗ್ರಾಹಕರ ವಿರುದ್ಧ ದೂರು ನೀಡುವುದಾಗಿ ಬ್ಯಾಂಕ್ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...