alex Certify
ಕನ್ನಡ ದುನಿಯಾ       Mobile App
       

Kannada Duniya

ಮುಷ್ಕರ, ಹಬ್ಬ –ಬ್ಯಾಂಕ್ ಗೆ ಸಾಲು ಸಾಲು ರಜೆ

bank-raje-dd

ಬ್ಯಾಂಕ್ ಗಳಲ್ಲಿ ನಿಮ್ಮ ಯಾವುದೇ ವ್ಯವಹಾರಗಳಿದ್ದಲ್ಲಿ ಮೊದಲೇ ಪ್ಲಾನ್ ಮಾಡಿಕೊಳ್ಳುವುದು ಒಳ್ಳೆಯದು. ಆಗಸ್ಟ್ 22 ರಂದು ದೇಶಾದ್ಯಂತ ಬ್ಯಾಂಕ್ ನೌಕರರು ಮುಷ್ಕರ ಕೈಗೊಂಡಿದ್ದಾರೆ. ಆಗಸ್ಟ್ 25 ರಿಂದ ಮತ್ತೆ 3 ದಿನ ಸತತ ರಜೆ ಇರುತ್ತದೆ.

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಉದ್ಯೋಗಿಗಳು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ಆಗಸ್ಟ್ 22 ರಂದು ದೇಶಾದ್ಯಂತ ಮುಷ್ಕರ ಕೈಗೊಂಡಿದ್ದು, ದೈನಂದಿನ ವಹಿವಾಟಿನ ಮೇಲೆ ಪರಿಣಾಮ ಬೀರಲಿದೆ.

ಭಾರತೀಯ ಬ್ಯಾಂಕಿಂಗ್ ಕ್ಷೇತ್ರದ 9 ಒಕ್ಕೂಟಗಳ ವೇದಿಕೆಯಾಗಿರುವ ಯು.ಎಫ್.ಬಿ.ಯು. ಮುಷ್ಕರಕ್ಕೆ ಕರೆ ನೀಡಿದೆ. ಆಲ್ ಇಂಡಿಯಾ ಬ್ಯಾಂಕ್ ಎಂಪ್ಲಾಯೀಸ್ ಅಸೋಸಿಯೇಷನ್(ಎ.ಐ.ಬಿ.ಇ.ಎ.) ಪ್ರಧಾನ ಕಾರ್ಯದರ್ಶಿ ಸಿ.ಹೆಚ್. ವೆಂಕಟಾಚಲಂ ಈ ಕುರಿತು ಮಾಹಿತಿ ನೀಡಿದ್ದು, ಎನ್.ಪಿ.ಎ. ಹೊರೆಯನ್ನು ವಿವಿಧ ಶುಲ್ಕಗಳ ಹೆಚ್ಚಳದ ನೆಪದಲ್ಲಿ ಗ್ರಾಹಕರ ಮೇಲೆ ವಿಧಿಸುವ ಕ್ರಮವನ್ನು ಕೈಬಿಡಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮುಷ್ಕರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಮುಖ್ಯ ಕಾರ್ಮಿಕ ಆಯುಕ್ತರ ಸಮ್ಮುಖದಲ್ಲಿ ನಡೆದ ಮಾತುಕತೆ ವಿಫಲವಾಗಿರುವುದರಿಂದ ನಾಳೆ ಮುಷ್ಕರ ನಡೆಯುವುದು ಖಚಿತವಾಗಿದೆ. ಗ್ರಾಹಕರ ಬ್ಯಾಂಕ್ ವಹಿವಾಟುಗಳಿಗೆ ತೊಂದರೆಯಾಗಲಿದೆ.

ಇದರೊಂದಿಗೆ ಆಗಸ್ಟ್ 25 ರಂದು ಗಣೇಶ ಚತುರ್ಥಿ, ಆಗಸ್ಟ್ 26 ರಂದು 4 ನೇ ಶನಿವಾರ, ಆಗಸ್ಟ್ 27 ರಂದು ಭಾನುವಾರ ಸತತವಾಗಿ ರಜೆ ಇರುತ್ತದೆ. ಹಾಗಾಗಿ ಮೊದಲೇ ಪ್ಲಾನ್ ಮಾಡಿಕೊಂಡು ನಿಮ್ಮ ಬ್ಯಾಂಕಿನ ಕೆಲಸಗಳನ್ನು ಮುಗಿಸಿಕೊಳ್ಳಿ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...