alex Certify
ಕನ್ನಡ ದುನಿಯಾ       Mobile App
       

Kannada Duniya

ಬ್ಯಾಂಕ್ ಗ್ರಾಹಕರಿಗೊಂದು ಮಾಹಿತಿ

bank-stri

ನವದೆಹಲಿ: ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ಬ್ಯಾಂಕ್ ಸಿಬ್ಬಂದಿ ಫೆಬ್ರವರಿ 28 ರಂದು ಮುಷ್ಕರ ಕೈಗೊಂಡಿದ್ದಾರೆ.

ವಸೂಲಾಗದ ಸಾಲಗಳಿಗೆ ಉನ್ನತ ಅಧಿಕಾರಿಗಳನ್ನು ಹೊಣೆ ಮಾಡಬಾರದು. ನೋಟ್ ಬ್ಯಾನ್ ಸಂದರ್ಭದಲ್ಲಿ ಬ್ಯಾಂಕ್ ಉದ್ಯೋಗಿಗಳು ಮಾಡಿದ ಹೆಚ್ಚುವರಿ ಕೆಲಸಕ್ಕೆ ಹೆಚ್ಚುವರಿ ವೇತನ ನೀಡಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಲಾಗಿದೆ.

ಬ್ಯಾಂಕ್ ಕಾರ್ಮಿಕ ಸಂಘಟನೆಗಳ ಸಂಯುಕ್ತ ವೇದಿಕೆ ಆಶ್ರಯದಲ್ಲಿ ಮುಷ್ಕರಕ್ಕೆ ಕರೆ ನೀಡಲಾಗಿದ್ದು, ರಾಷ್ಟ್ರೀಕೃತ ಬ್ಯಾಂಕ್ ಗಳ ನೌಕರರು ಮುಷ್ಕರ ನಡೆಸಲಿದ್ದಾರೆ. ಖಾಸಗಿ ಬ್ಯಾಂಕ್ ಕಾರ್ಯ ನಿರ್ವಹಿಸಲಿವೆ.

ಅಖಿಲ ಭಾರತ ಬ್ಯಾಂಕ್ ನೌಕರರ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಸಿ.ಹೆಚ್. ವೆಂಕಟಾಚಲ ಈ ಕುರಿತು ಮಾಹಿತಿ ನೀಡಿದ್ದು, ಫೆಬ್ರವರಿ 21 ರಂದು ನಡೆದ ಸಂಧಾನ ಸಭೆಯಲ್ಲಿ ಮಾತುಕತೆ ಮುರಿದು ಬಿದ್ದ ಕಾರಣಕ್ಕೆ ಮುಷ್ಕರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಸೇವೆ ಇರುವುದಿಲ್ಲ. ಖಾಸಗಿ ಬ್ಯಾಂಕ್ ಗಳಲ್ಲಿ ಚೆಕ್ ಕ್ಲಿಯರೆನ್ಸ್ ಹೊರತಾಗಿ ಇತರೆ ಸೇವೆ ಇರುತ್ತವೆ. ಎ.ಟಿ.ಎಂ. ಸೇವೆಗಳಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...