alex Certify
ಕನ್ನಡ ದುನಿಯಾ       Mobile App
       

Kannada Duniya

ಸೆ. 2 ರಂದು ಬ್ಯಾಂಕ್ ವಹಿವಾಟು ಬಂದ್

bank-striek

ವಡೋದರಾ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ, ಕೇಂದ್ರ ಸರ್ಕಾರದ ಜನ ವಿರೋಧಿ ಮತ್ತು ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ, ಸೆಪ್ಟೆಂಬರ್ 2 ರಂದು ಕಾರ್ಮಿಕ ಸಂಘಟನೆಗಳು ಮುಷ್ಕರಕ್ಕೆ ಕರೆ ನೀಡಿವೆ.

ಈ ಮುಷ್ಕರಕ್ಕೆ 5 ಲಕ್ಷ ಬ್ಯಾಂಕ್ ನೌಕರರು ಮತ್ತು ಅಧಿಕಾರಿಗಳು ಬೆಂಬಲ ಘೋಷಿಸಿದ್ದು, ಸೆಪ್ಟೆಂಬರ್ 2 ರಂದು ಬ್ಯಾಂಕ್ ವಹಿವಾಟು ನಡೆಯುವುದಿಲ್ಲ. ಬ್ಯಾಂಕ್ ನೌಕರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸಿ.ಹೆಚ್. ವೆಂಕಟಾಚಲಂ ಅವರು, ಈ ಕುರಿತು ಮಾಹಿತಿ ನೀಡಿದ್ದು, ಬ್ಯಾಂಕಿಂಗ್ ಕ್ಷೇತ್ರದ ಮೇಲೆ ದಾಳಿಗಳು ಹೆಚ್ಚಾಗಿವೆ ಎಂದು ದೂರಿದ್ದಾರೆ. ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಗಳನ್ನು ಖಾಸಗೀಕರಣಗೊಳಿಸುವ ಪ್ರಕ್ರಿಯೆ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಹವರ್ತಿ ಬ್ಯಾಂಕ್ ಗಳನ್ನು ವಿಲೀನ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರದ ಜನ ಹಾಗೂ ಕಾರ್ಮಿಕ ವಿರೋಧಿ ನೀತಿ ವಿರೋಧಿಸಿ ಕಾರ್ಮಿಕ ಸಂಘಟನೆಗಳು ನಡೆಸುತ್ತಿರುವ ಮುಷ್ಕರಕ್ಕೆ ಬೆಂಬಲ ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...