alex Certify
ಕನ್ನಡ ದುನಿಯಾ       Mobile App
       

Kannada Duniya

ಬ್ಯಾಂಕ್ ಗ್ರಾಹಕರಿಗೆ ಇಲ್ಲಿದೆ ಗುಡ್ ನ್ಯೂಸ್

ನವದೆಹಲಿ: ಮಹಾವೀರ ಜಯಂತಿ ಪ್ರಯುಕ್ತ ಮಾರ್ಚ್ 29, ಗುಡ್ ಫ್ರೈಡೇ ಪ್ರಯುಕ್ತ ಮಾರ್ಚ್ 30 ರಂದು ಹಾಗೂ ಶನಿವಾರ ಮತ್ತು ಭಾನುವಾರ ಬ್ಯಾಂಕ್ ಗಳಿಗೆ ಸತತವಾಗಿ ರಜೆ ಇರುತ್ತದೆ ಎಂದು ಹೇಳಲಾಗಿತ್ತು.

ಆದರೆ, ಮಾರ್ಚ್ 31 ರಂದು ಶನಿವಾರ ಬ್ಯಾಂಕ್ ಗಳು ಎಂದಿನಂತೆಯೇ ಕಾರ್ಯನಿರ್ವಹಿಸಲಿವೆ. ಮಾರ್ಚ್ 29 ಮತ್ತು 30 ರಂದು ಬ್ಯಾಂಕ್ ಗಳಿಗೆ ರಜೆ ಇರುತ್ತದೆ. ಆದರೆ, 31 ರಂದು ಸಾರ್ವಜನಿಕ ಮತ್ತು ಖಾಸಗಿ ವಲಯದ ಬ್ಯಾಂಕ್ ಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ಕೇಂದ್ರ ಹಣಕಾಸು ಮಂತ್ರಾಲಯ ತಿಳಿಸಿದೆ.

ಬ್ಯಾಂಕ್ ಗಳು, ಆದಾಯ ತೆರಿಗೆ ಇಲಾಖೆ ಕಚೇರಿಗಳು ಶನಿವಾರ ಕಾರ್ಯನಿರ್ವಹಿಸಲಿವೆ. ತೆರಿಗೆ ರಿಟರ್ನ್ಸ್ ಸಲ್ಲಿಸುವವರಿಗೆ ನೆರವಾಗುವಂತೆ ಶನಿವಾರವೂ ತೆರಿಗೆ ಕಚೇರಿಗಳು ಕಾರ್ಯನಿರ್ವಹಿಸುತ್ತವೆ.

ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿರುವಂತೆ ನಿರಂತರವಾಗಿ ಬ್ಯಾಂಕ್ ಗಳಿಗೆ ರಜೆ ಇರುವುದಿಲ್ಲ. ಶನಿವಾರ ಎಂದಿನಂತೆಯೇ ಕಾರ್ಯನಿರ್ವಹಿಸಲಿವೆ ಎಂದು ಬ್ಯಾಂಕಿನ ಅಧಿಕಾರಿಗಳು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...