alex Certify
ಕನ್ನಡ ದುನಿಯಾ       Mobile App
       

Kannada Duniya

ವಾಹನ ಮಾಲೀಕರಿಗೆ ಸಿಹಿ ಸುದ್ದಿ, ಆದರೂ….

ben-bunk

ಬೆಂಗಳೂರು: ಬೆಂಗಳೂರಿನ ವಾಹನ ಮಾಲೀಕರಿಗೆ ಸಿಹಿ ಸುದ್ದಿ ಇಲ್ಲಿದೆ. ನಿಮ್ಮ ಮನೆ ಬಾಗಿಲಿಗೆ ಪೆಟ್ರೋಲ್ ತಲುಪುವ ಸೌಲಭ್ಯ ಈಗಾಗಲೇ ಆರಂಭವಾಗಿದೆ.

ಕೇಂದ್ರ ಸರ್ಕಾರ ಏಪ್ರಿಲ್ ನಲ್ಲಿ ಗ್ರಾಹಕರ ಮನೆ ಬಾಗಿಲಿಗೆ ಇಂಧನ ಪೂರೈಸುವ ಯೋಜನೆ ಜಾರಿಗೆ ತರುವುದಾಗಿ ಹೇಳಿತ್ತು. ಆ ಯೋಜನೆ ಇನ್ನೂ ಜಾರಿಯಾಗಿಲ್ಲ. ಅದಕ್ಕಿಂತ ಮೊದಲೇ ಬೆಂಗಳೂರಿನಲ್ಲಿ ಮನೆ ಬಾಗಿಲಿಗೆ ಪೆಟ್ರೋಲ್ ತಲುಪಿಸುವ ವ್ಯವಸ್ಥೆಯನ್ನು ‘ಮೈ ಪೆಟ್ರೋಲ್ ಪಂಪ್ ಡಾಟ್ ಕಾಂ’ ಸಂಸ್ಥೆ ಆರಂಭಿಸಿದೆ.

ಬಂಕ್ ಗಳಲ್ಲಿ ಸರತಿ ಸಾಲಿನಲ್ಲಿ ನಿಂತು ಕಾಯುವ ಬದಲು, ಒಂದು ಫೋನ್ ಮಾಡಿ ನಿಮ್ಮ ಮನೆ ಬಾಗಿಲಿಗೆ ಪೆಟ್ರೋಲ್ ತರಿಸಿಕೊಳ್ಳಬಹುದಾಗಿದೆ.

ಬೆಂಗಳೂರಿನ ಹೆಚ್.ಎಸ್.ಆರ್. ಲೇಔಟ್, ಸರ್ಜಾಪುರ ರಸ್ತೆ, ಮೈಸೂರು ರೋಡ್, ಓಲ್ಡ್ ಏರ್ ಪೋರ್ಟ್ ರೋಡ್, ಯಶವಂತಪುರ ಮೊದಲಾದ ಕಡೆಗಳಲ್ಲಿ ಮನೆ ಬಾಗಿಲಿಗೆ ಪೆಟ್ರೋಲ್ ತಲುಪಿಸಲಾಗುತ್ತಿದೆ ಎನ್ನಲಾಗಿದೆ.

ಹೀಗೆ ಮನೆ ಬಾಗಿಲಿಗೆ ಪೆಟ್ರೋಲ್ ತಲುಪಿಸಲು ಸೇವಾ ಶುಲ್ಕವನ್ನು ಪಡೆಯಲಾಗುತ್ತದೆ. ಆದರೆ, ಈ ಪೆಟ್ರೋಲ್ ಪೂರೈಕೆ ದಂಧೆ ಅಕ್ರಮವಾಗಿ ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಯಾವುದೇ ಅನುಮತಿಯನ್ನು ಪಡೆಯದೇ ಮನೆ ಬಾಗಿಲಿಗೆ ಕಲಬೆರಕೆ ಪೆಟ್ರೋಲ್ ಪೂರೈಸಲಾಗುತ್ತಿದೆ. ಅಕ್ರಮವಾಗಿ ಕಲಬೆರಕೆ ಪೆಟ್ರೋಲ್ ಮನೆ ಬಾಗಿಲಿಗೆ ತಲುಪಿಸುತ್ತಿರುವ ಬಗ್ಗೆ ಮಾಹಿತಿ ಬಂದಿದ್ದು, ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಪೆಟ್ರೋಲ್ ಬಂಕ್ ಮಾಲೀಕರು ಹೇಳಿದ್ದಾರೆ.

ಕೆಲವರು ಗುಣಮಟ್ಟವಲ್ಲದ ಪೆಟ್ರೋಲ್ ಗ್ರಾಹಕರಿಗೆ ನೀಡುತ್ತಿದ್ದು, ಅಕ್ರಮ ದಂಧೆಗೆ ಕಡಿವಾಣ ಹಾಕಬೇಕೆಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...