alex Certify
ಕನ್ನಡ ದುನಿಯಾ       Mobile App
       

Kannada Duniya

ವಾಹನ ಸವಾರರೇ ಚಿಂತೆ ಬಿಡಿ, ಇಲ್ಲಿದೆ ನೆಮ್ಮದಿ ಸುದ್ದಿ….

ಬೆಂಗಳೂರು:  ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ಪೆಟ್ರೋಲ್ ಟ್ಯಾಂಕ್ ಮಾಲೀಕರು ಕೈಗೊಂಡಿದ್ದ ಮುಷ್ಕರವನ್ನು ಕೈಬಿಟ್ಟಿದ್ದಾರೆ. ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಭರವಸೆ ಹಿನ್ನಲೆಯಲ್ಲಿ ಟ್ಯಾಂಕರ್ ಚಾಲಕರು, ಮಾಲೀಕರು ಮುಷ್ಕರ ಕೈಬಿಡಲು ತೀರ್ಮಾನಿಸಿದ್ದಾರೆ.

ತೈಲ ಪೂರೈಕೆ ಮಾಡುವ ಟ್ಯಾಂಕರ್ ಗಳ ಮಾಲೀಕರು ಮುಷ್ಕರ ಕೈಗೊಂಡಿದ್ದ ಹಿನ್ನಲೆಯಲ್ಲಿ ಇಂಧನ ಪೂರೈಕೆಯಲ್ಲಿ ವ್ಯತ್ಯಯವಾಗಿತ್ತು. 2 ದಿನಗಳಿಂದ ತೈಲ ಪೂರೈಕೆ ಸ್ಥಗಿತವಾಗಿ ಅನೇಕ ಬಂಕ್ ಗಳಲ್ಲಿ ಪೆಟ್ರೋಲ್, ಡೀಸೆಲ್ ಸಿಗಂದಂತಾಗಿತ್ತು.

ಹೊಸಕೋಟೆ ದೇವನಗೊಂದಿಯ ತೈಲ ಘಟಕಗಳಿಗೆ ಸಾಗುವ ರಸ್ತೆಯಲ್ಲಿ ಗುಂಡಿಗಳು ಬಿದ್ದಿದ್ದು, ತೈಲ ಪೂರೈಕೆ ಮಾಡುವ ಲಾರಿಗಳ ಅಪಘಾತದ ಪ್ರಮಾಣ ಹೆಚ್ಚಳವಾಗಿದೆ. ಈ ಹಿನ್ನಲೆಯಲ್ಲಿ ರಸ್ತೆ ದುರಸ್ತಿಗೆ ಒತ್ತಾಯಿಸಿ ಮುಷ್ಕರ ಕೈಗೊಳ್ಳಲಾಗಿತ್ತು. ಇದರಿಂದ ತೈಲ ಪೂರೈಕೆಯಲ್ಲಿ ವ್ಯತ್ಯಯವಾಗಿದ್ದು, ಅಧಿಕಾರಿಗಳು ಕೂಡಲೇ ರಸ್ತೆ ದುರಸ್ತಿ ಮಾಡುವುದಾಗಿ ಭರವಸೆ ನೀಡಿದ ಹಿನ್ನಲೆಯಲ್ಲಿ ಮುಷ್ಕರ ಕೈಬಿಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...