alex Certify
ಕನ್ನಡ ದುನಿಯಾ       Mobile App
       

Kannada Duniya

‘ಭಾರತ್ ಬಂದ್’ ದಿನವೂ ಏರಿಕೆ ಕಂಡ ಪೆಟ್ರೋಲ್-ಡೀಸೆಲ್ ದರ

ತೈಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಇಂದು ‘ಭಾರತ ಬಂದ್’ ಗೆ ಕರೆ ನೀಡಿದ್ದು, ಇದರ ಮಧ್ಯೆ ಕಳೆದ ಹಲವು ದಿನಗಳಿಂದ ನಿರಂತರವಾಗಿ ಏರಿಕೆ ಕಾಣುತ್ತಿದ್ದ ಪೆಟ್ರೋಲ್-ಡೀಸೆಲ್ ದರ ಇಂದು ಕೂಡಾ ಏರಿಕೆ ಕಂಡಿದೆ.

ಪೆಟ್ರೋಲ್ ದರ ಇಂದು 24 ಪೈಸೆಯಷ್ಟು ಏರಿಕೆ ಕಂಡಿದ್ದು, ಪ್ರತಿ ಲೀಟರ್ ಗೆ 83.36 ರೂಪಾಯಿಗಳಾಗಿದೆ. ಅದೇ ರೀತಿ ಡೀಸೆಲ್ ಬೆಲೆಯಲ್ಲಿ 23 ಪೈಸೆಯಷ್ಟು ಕಡಿಮೆಯಾಗಿದ್ದು, ಪ್ರತಿ ಲೀಟರ್ ಗೆ 75.18 ರೂಪಾಯಿಗಳಾಗಿದೆ.

ಕಳೆದ ಹಲವು ದಿನಗಳ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಕಾಣುತ್ತಿದ್ದು, ಬಂದ್ ದಿನವೂ ಮತ್ತಷ್ಟು ಏರಿಕೆಯಾಗಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಸಾರ್ವಜನಿಕರು ಪೆಟ್ರೋಲ್-ಡೀಸೆಲ್ ಬೆಲೆ ಗಣನೀಯವಾಗಿ ಇಳಿಕೆ ಕಾಣಲೆಂದು ಆಗ್ರಹಿಸುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...