alex Certify
ಕನ್ನಡ ದುನಿಯಾ       Mobile App
       

Kannada Duniya

ಇಳಿಕೆಯಾಗುತ್ತಾ ಪೆಟ್ರೋಲ್-ಡೀಸೆಲ್ ಬೆಲೆ…?

ನಿರಂತರವಾಗಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಯಾಗುತ್ತಿರುವ ಕಾರಣ ಜನಸಾಮಾನ್ಯರ ಬವಣೆ ಹೇಳತೀರದಂತಾಗಿದೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್, ಇಂದು ‘ಭಾರತ್ ಬಂದ್’ ಗೆ ಕರೆ ನೀಡಿದ್ದು, ಇದಕ್ಕೆ ಹಲವು ಪಕ್ಷಗಳು ಹಾಗೂ ಸಂಘಟನೆಗಳು ಕೈ ಜೋಡಿಸಿವೆ.

ಭಾರತ್ ಬಂದ್ ಗೆ ಶ್ರೀಸಾಮಾನ್ಯರೂ ಬೆಂಬಲ ನೀಡುತ್ತಿದ್ದು, ಸಂಪೂರ್ಣ ಯಶಸ್ಸು ಕಾಣುವ ಸಾಧ್ಯತೆ ಇದೆ. 2019ರ ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ತೈಲ ಬೆಲೆ ಏರಿಕೆಯಿಂದಾಗಿ ಜನರ ಆಕ್ರೋಶವನ್ನು ಎದುರಿಸಬೇಕಾಗಿ ಬಂದಿರುವುದು ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರಕ್ಕೆ ಸಂಕಷ್ಟ ತಂದೊಡ್ಡಿದೆ.

ಪೆಟ್ರೋಲ್-ಡೀಸೆಲ್ ಬೆಲೆಯನ್ನು ಜಿ.ಎಸ್.ಟಿ. ವ್ಯಾಪ್ತಿಗೆ ಒಳಪಡಿಸಬೇಕೆಂಬ ಒತ್ತಾಯ ಈ ಹಿಂದಿನಿಂದಲೂ ಕೇಳಿಬರುತ್ತಿದ್ದು, ಈಗ ಜನಸಾಮಾನ್ಯರ ಆಕ್ರೋಶಕ್ಕೆ ಮಣಿದು ಪೆಟ್ರೋಲ್-ಡೀಸೆಲ್ ಬೆಲೆಯನ್ನು ಜಿ.ಎಸ್.ಟಿ. ವ್ಯಾಪ್ತಿಗೆ ತರುವ ಮೂಲಕ ಕೊಂಚ ಮಟ್ಟಿಗೆ ತಗ್ಗಿಸುವ ಪ್ರಯತ್ನವನ್ನು ಕೇಂದ್ರ ಸರ್ಕಾರ ಮಾಡುವ ಸಾಧ್ಯತೆಗಳಿವೆ.

ಆದರೆ ಇದಕ್ಕೆ ಎಲ್ಲ ರಾಜ್ಯ ಸರ್ಕಾರಗಳ ಬೆಂಬಲವೂ ಅಗತ್ಯವಾಗಿರುವ ಕಾರಣ ಜೊತೆಗೆ ರೂಪಾಯಿ ಎದುರು ಡಾಲರ್ ಮೌಲ್ಯ ಏರಿಕೆಯಾಗುತ್ತಿರುವುದು ಕೇಂದ್ರ ಸರ್ಕಾರ ಈ ಕುರಿತ ನಿರ್ಧಾರ ಕೈಗೊಳ್ಳುವುದು ಸದ್ಯಕ್ಕೆ ಕಷ್ಟದ ಮಾತು ಎನ್ನಲಾಗುತ್ತಿದೆ. ಲೋಕಸಭಾ ಚುನಾವಣೆ ಸಮೀಪವಿರುವಾಗ ತೈಲ ಬೆಲೆ ಇದೇ ರೀತಿ ಏರುಮುಖದಲ್ಲಿದ್ದರೆ ಆ ಸಂದರ್ಭದಲ್ಲಿ ಬೆಲೆ ಕಡಿವಾಣಕ್ಕೆ ಸರ್ಕಾರ ಮುಂದಾಗಬಹುದು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...