alex Certify
ಕನ್ನಡ ದುನಿಯಾ       Mobile App
       

Kannada Duniya

ಜಿ.ಎಸ್.ಟಿ. ವ್ಯಾಪ್ತಿಗೆ ತೈಲ ದರ: ಮಹಾರಾಷ್ಟ್ರ ಸಿಎಂ ಸಹಮತ

ದೇಶದಲ್ಲಿ ಪೆಟ್ರೋಲ್-ಡಿಸೇಲ್ ದರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಇದರಿಂದ ದೈನಂದಿನ ಬಳಕೆಯ ವಸ್ತುಗಳ ಬೆಲೆಯೂ ಏರಿಕೆಯಾಗುವ ಆತಂಕ ವ್ಯಕ್ತವಾಗಿದೆ.

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ನಿಗದಿಯಾಗುವ ತೈಲ ದರಕ್ಕೆ ಅನುಗುಣವಾಗಿ ದೇಶದಲ್ಲೂ ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ದರ ನಿಗದಿ ಮಾಡುತ್ತಿದ್ದು, ಕಳೆದ ಹತ್ತು ದಿನಗಳಿಂದಲೂ ಈ ದರಗಳಲ್ಲಿ ಏರಿಕೆಯಾಗುತ್ತಲೇ ಇದೆ.

ಮುಂಬೈನಲ್ಲಿ ಪೆಟ್ರೋಲ್ ದರ 85 ರ ಗಡಿಯನ್ನು ದಾಟಿದ್ದು, ಬೆಂಗಳೂರಿನಲ್ಲಿ 78.73 ರೂ. ಇದೆ ಇದು ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದ್ದು, ವಾಹನ ಸವಾರರಲ್ಲಿ ದಿಗಿಲು ಹುಟ್ಟಿಸಿದೆ.

ಈ ಮಧ್ಯೆ ತೈಲ ದರ ಏರಿಕೆ ಕುರಿತಂತೆ ಮಾತನಾಡಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಜಿ.ಎಸ್.ಟಿ. ವ್ಯಾಪ್ತಿಗೆ ತೈಲ ದರಗಳು ಬಂದರೆ ಬೆಲೆಯಲ್ಲಿ ಇಳಿಕೆಯಾಗಲಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ತಮ್ಮ ಸರ್ಕಾರ ಈ ಹಿಂದಿನಿಂದಲೂ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಜಿ.ಎಸ್.ಟಿ. ವ್ಯಾಪ್ತಿಗೆ ಒಳಪಡಿಸಲು ಹೇಳುತ್ತಿದ್ದು, ಕೆಲ ರಾಜ್ಯಗಳು ಒಪ್ಪಿಗೆ ಸೂಚಿಸುತ್ತಿಲ್ಲವಾದ ಕಾರಣ ಇದು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...