alex Certify
ಕನ್ನಡ ದುನಿಯಾ       Mobile App
       

Kannada Duniya

ರೈತರ ಆದಾಯ ದ್ವಿಗುಣ: ಕೇಂದ್ರದಿಂದ ಶುಭ ಸುದ್ದಿ….

ನವದೆಹಲಿ: ಕೇಂದ್ರ ಹಣಕಾಸು ಖಾತೆ ಸಚಿವ ಅರುಣ್ ಜೇಟ್ಲಿ ಅವರು, ಫೆಬ್ರವರಿ 1 ರಂದು ಬಜೆಟ್ ಮಂಡಿಸಲಿದ್ದು, ಹಲವಾರು ವಲಯಗಳಿಂದ ನಿರೀಕ್ಷೆ ಹೆಚ್ಚಾಗಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, 2022 ಕ್ಕೆ ರೈತರ ಆದಾಯವನ್ನು ದ್ವಿಗುಣಗೊಳಿಸಲು ಪ್ಲಾನ್ ಮಾಡಿದ್ದು, ಇದಕ್ಕೆ ಪೂರಕವಾಗಿ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಹಲವು ಯೋಜನೆ ಘೋಷಣೆಯಾಗುವ ಸಾಧ್ಯತೆ ಇದೆ.

ಅದರಲ್ಲಿ ಪ್ರಮುಖವಾಗಿ ರಾಷ್ಟ್ರೀಯ ಕೃಷಿ ರಫ್ತು ನೀತಿಯನ್ನು ಪ್ರಕಟಿಸುವ ಸಾಧ್ಯತೆ ಇದೆ. ಇದರ ಪ್ರಕಾರ ರೈತರು ತಮ್ಮ ಉತ್ಪನ್ನಗಳನ್ನು ವೆಬ್ ಪೋರ್ಟಲ್ ಮೂಲಕ ರಫ್ತು ಮಾರುಕಟ್ಟೆಯಲ್ಲಿ ಮಾರಾಟ ಮಾಡಬಹುದಾಗಿದೆ.

ಭಾರತದ ರಫ್ತು ಮಾರುಕಟ್ಟೆಯಲ್ಲಿ ಕೃಷಿ ಉತ್ಪನ್ನಗಳಾದ ಹತ್ತಿ, ಅಕ್ಕಿ, ಸಕ್ಕರೆ ಪ್ರಮುಖವಾಗಿವೆ. ರಾಷ್ಟ್ರೀಯ ಕೃಷಿ ನೀತಿ ಘೋಷಣೆಯಾದಲ್ಲಿ ರೈತರು ತಮ್ಮ ಉತ್ಪನ್ನಗಳನ್ನು ರಫ್ತು ಮಾರುಕಟ್ಟೆಯಲ್ಲಿ ನೇರವಾಗಿ ಮಾರಾಟ ಮಾಡಲು ಅವಕಾಶ ಸಿಗಲಿದೆ.

2016 -17 ರಲ್ಲಿ ಧಾನ್ಯಗಳು, ಸಂಸ್ಕರಿಸಿದ ಹಣ್ಣು ಮತ್ತು ತರಕಾರಿಗಳು, ಸಂಸ್ಕರಿತ ಆಹಾರ, ಪ್ರಾಣಿ ಉತ್ಪನ್ನ ಒಳಗೊಂಡ ಕೃಷಿ ಉತ್ಪನ್ನಗಳ ರಫ್ತು 16.27 ಬಿಲಿಯನ್ ಡಾಲರ್ ಗಳಷ್ಟಿತ್ತು.

ಕೃಷಿ ಆಧಾರಿತ ರಫ್ತು ಮತ್ತು ಆಮದು ಕುಸಿತವಾಗಿದೆ. ಈ ಹಿನ್ನಲೆಯಲ್ಲಿ ರಾಷ್ಟ್ರೀಯ ಕೃಷಿ ರಫ್ತು ನೀತಿಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಯೋಜಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...