alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಲೆ ಏರಿಕೆಯಿಂದ ತತ್ತರಿಸಿದವರಿಗೆ ‘ಬಜೆಟ್’ ನಲ್ಲಿ ಶುಭ ಸುದ್ದಿ….?

ಬೆಂಗಳೂರು: ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಪ್ರಯಾಣಿಕರಿಗೆ ಶುಭ ಸುದ್ದಿ ಇಲ್ಲಿದೆ. ಸರ್ಕಾರಿ ಬಸ್ ಪ್ರಯಾಣ ದರವನ್ನು ಶೇ. 10 ರಷ್ಟು ಇಳಿಕೆ ಮಾಡಲು ಚಿಂತಿಸಲಾಗಿದೆ.

ನಾಳೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಬಜೆಟ್ ಪೂರ್ವಭಾವಿ ಸಭೆ ನಡೆಸಲಿದ್ದು, ಸಭೆಯಲ್ಲಿ ಸಾರಿಗೆ ಇಲಾಖೆಯ ವಿಚಾರಗಳ ಕುರಿತಾಗಿ ಚರ್ಚೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಯಾಣ ದರ ಇಳಿಕೆಗೆ ಮನವಿ ಮಾಡಲಾಗುವುದು ಎಂದು ಸಾರಿಗೆ ಸಚಿವ ಹೆಚ್.ಎಂ. ರೇವಣ್ಣ ತಿಳಿಸಿದ್ದಾರೆ.

ಇಂದು ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಲಾಗಿದೆ. ಸಾರಿಗೆ ಸಂಸ್ಥೆಯ 4 ಕಾರ್ಪೊರೇಷನ್ ಗಳು ನಷ್ಟದಲ್ಲಿವೆ. ಲಾಭ ಮಾಡುವುದು ನಮ್ಮ ಉದ್ದೇಶವಲ್ಲ ಎಂದು ಹೇಳಿದ್ದಾರೆ.

ನಾಳಿನ ಸಭೆಯಲ್ಲಿ ಪ್ರಯಾಣ ದರವನ್ನು ಶೇ. 10 ರಷ್ಟು ಇಳಿಕೆ ಮಾಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...