alex Certify
ಕನ್ನಡ ದುನಿಯಾ       Mobile App
       

Kannada Duniya

GST: ರಾಜ್ಯಕ್ಕೆ ಸಿಹಿ ಸುದ್ದಿ ನೀಡಿದ ಕೇಂದ್ರ….

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ(ಜಿ.ಎಸ್.ಟಿ.) ಜಾರಿಯಾದ ಬಳಿಕ ರಾಜ್ಯಗಳಿಗೆ ಆದಾಯ ನಷ್ಟ ಸರಿದೂಗಿಸಲು ಕೇಂದ್ರ ಸರ್ಕಾರ ಪರಿಹಾರವನ್ನು ನೀಡ್ತಿದೆ.

ಜುಲೈನಿಂದ ಅಕ್ಟೋಬರ್ ವರೆಗಿನ ಅವಧಿಯಲ್ಲಿ ರಾಜ್ಯಗಳಿಗೆ 24,500 ಕೋಟಿ ರೂ. ಗಳನ್ನು ಕೇಂದ್ರ ಸರ್ಕಾರದಿಂದ ರಾಜ್ಯಗಳಿಗೆ ಬಿಡುಗಡೆ ಮಾಡಲಾಗಿದೆ. ಅದರಲ್ಲಿ ಕರ್ನಾಟಕಕ್ಕೆ ಸಿಂಹಪಾಲು ದೊರೆತಿದೆ.

ಕರ್ನಾಟಕಕ್ಕೆ 3,271 ಕೋಟಿ ರೂ. ಪರಿಹಾರ ನೀಡಲಾಗಿದೆ ಎಂದು ಲೋಕಸಭೆಯಲ್ಲಿ ಕೇಂದ್ರ ಹಣಕಾಸು ಖಾತೆ ಸಹಾಯಕ ಸಚಿವ ಶಿವ ಪ್ರತಾಪ್ ಶುಕ್ಲ ತಿಳಿಸಿದ್ದಾರೆ.

ನವೆಂಬರ್ ನಲ್ಲಿ ಜಿ.ಎಸ್.ಟಿ. ಪರಿಹಾರ ಬಿಡುಗಡೆ ಮಾಡಲಾಗಿದ್ದು, ಕರ್ನಾಟಕಕ್ಕೆ 3,271 ಕೋಟಿ ರೂ. ಗುಜರಾತ್ ಗೆ 2,282 ಕೋಟಿ ರೂ., ಪಂಜಾಬ್ ಗೆ 2098 ಕೋಟಿ ರೂ., ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...