alex Certify
ಕನ್ನಡ ದುನಿಯಾ       Mobile App
       

Kannada Duniya

GST ರಿಟರ್ನ್ಸ್: ಸಿಹಿ ಸುದ್ದಿ ನೀಡಿದ ಕೇಂದ್ರ

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ(ಜಿ.ಎಸ್.ಟಿ.) ರಿಟರ್ನ್ಸ್ ಸಲ್ಲಿಸದವರು ಮತ್ತು ವಿಳಂಬವಾಗಿ ರಿಟರ್ನ್ಸ್ ಸಲ್ಲಿಕೆ ಮಾಡಿದವರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದೆ.

ಆಗಸ್ಟ್ ಮತ್ತು ಸೆಪ್ಟಂಬರ್ ತಿಂಗಳ ಜಿ.ಎಸ್.ಟಿ. ರಿಟರ್ನ್ಸ್ ಸಲ್ಲಿಕೆ ವಿಳಂಬದ ದಂಡವನ್ನು ಮನ್ನಾ ಮಾಡಲಾಗಿದೆ. ವಿಳಂಬವಾಗಿ ಜಿ.ಎಸ್.ಟಿ. ರಿಟರ್ನ್ಸ್ ಸಲ್ಲಿಕೆ ಮಾಡಿದವರಿಗೆ ಜುಲೈ ತಿಂಗಳಲ್ಲಿ ವಿನಾಯಿತಿ ನೀಡಲಾಗಿತ್ತು.

ಅದೇ ರೀತಿ ಆಗಸ್ಟ್ ಮತ್ತು ಸೆಪ್ಟಂಬರ್ ತಿಂಗಳ ಜಿ.ಎಸ್.ಟಿ. ರಿಟರ್ನ್ಸ್ ಅನ್ನು ವಿಳಂಬವಾಗಿ ಸಲ್ಲಿಸಿದವರು ಮತ್ತು ಸಲ್ಲಿಕೆ ಮಾಡದಿದ್ದವರಿಗೆ ದಂಡದಿಂದ ವಿನಾಯಿತಿ ನೀಡಲಾಗಿದೆ.

ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಈ ಕುರಿತು ಮಾಹಿತಿ ನೀಡಿದ್ದು, ಕೇಂದ್ರ ಜಿ.ಎಸ್.ಟಿ. ಮತ್ತು ರಾಜ್ಯ ಜಿ.ಎಸ್.ಟಿ. ತೆರಿಗೆ ಪಾವತಿಸದವರಿಗೆ ವಿಳಂಬದ ಪ್ರತಿ ದಿನಕ್ಕೆ 100 ರೂ. ದಂಡ ವಿಧಿಸಲಾಗುತ್ತಿತ್ತು. ಈಗ ವಿನಾಯಿತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ತೆರಿಗೆದಾರರಿಗೆ ಅನುಕೂಲವಾಗಲೆಂದು ಆಗಸ್ಟ್ ಮತ್ತು ಸೆಪ್ಟಂಬರ್ ಸಂಬಂಧಿಸಿದ ಜಿ.ಎಸ್.ಟಿ. ರಿಟರ್ನ್ಸ್ ಸಲ್ಲಿಕೆಯಲ್ಲಿ ವಿಳಂಬ ಮಾಡಿದವರಿಗೆ ವಿನಾಯಿತಿ ನೀಡಲಾಗಿದೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...