alex Certify
ಕನ್ನಡ ದುನಿಯಾ       Mobile App
       

Kannada Duniya

ನಾಣ್ಯಗಳನ್ನು ಹೊಂದಿರುವವರಿಗೆ ಇಲ್ಲಿದೆ ಗುಡ್ ನ್ಯೂಸ್

ನವದೆಹಲಿ: 10 ರೂಪಾಯಿ ನಾಣ್ಯವನ್ನು ರದ್ದು ಮಾಡಿರದಿದ್ದರೂ, ಅನೇಕ ಕಡೆಗಳಲ್ಲಿ ವರ್ತಕರು, ಜನ ಸಾಮಾನ್ಯರು ಇವುಗಳನ್ನು ಸ್ವೀಕರಿಸಲು ಹಿಂದೇಟು ಹಾಕ್ತಾರೆ.

ಕೆಲವು ಬ್ಯಾಂಕ್ ಗಳಲ್ಲಿ ನ್ಯಾಣ್ಯಗಳನ್ನು ಸ್ವೀಕರಿಸಲು ಹಿಂದೇಟು ಹಾಕಿದ ಕಾರಣ, ನಾಣ್ಯಗಳನ್ನು ಹೆಚ್ಚಿನ ಜನ ಸ್ವೀಕರಿಸುತ್ತಿಲ್ಲ ಎಂಬ ದೂರು ಕೇಳಿ ಬಂದಿದ್ದವು. ಇವೇ ಮೊದಲಾದ ಕಾರಣಗಳಿಂದಾಗಿ ಬ್ಯಾಂಕ್ ಗಳಲ್ಲಿ ನಾಣ್ಯ ಮೇಳ ನಡೆಸುವಂತೆ ಭಾರತೀಯ ರಿಸರ್ವ್ ಬ್ಯಾಂಕ್(ಆರ್.ಬಿ.ಐ.) ವಾಣಿಜ್ಯ ಬ್ಯಾಂಕ್ ಗಳಿಗೆ ಸೂಚನೆ ನೀಡಿದೆ.

ಬ್ಯಾಂಕ್ ಶಾಖೆಗಳಲ್ಲಿ ನಾಣ್ಯಗಳ ಮೇಳ ನಡೆಸುವಂತೆ ಆರ್.ಬಿ.ಐ. ಸೂಚನೆ ನೀಡಿದೆ. 2016 ರ ನವೆಂಬರ್ ನಲ್ಲಿ 500 ರೂ. ಮತ್ತು 1000 ರೂ. ಮುಖಬೆಲೆಯ ನೋಟುಗಳನ್ನು ರದ್ದು ಮಾಡಿದ ನಂತರದಲ್ಲಿ ನಾಣ್ಯಗಳನ್ನು ಹೆಚ್ಚಿನ ಪ್ರಮಾಣದಲ್ಲಿ ವಿತರಿಸಲಾಗಿತ್ತು.

ನಂತರದಲ್ಲಿ ಸ್ಥಳಾವಕಾಶದ ಕೊರತೆಯಿಂದ ಸಣ್ಣ ನಗರಗಳು, ಪಟ್ಟಣಗಳ ಬ್ಯಾಂಕ್ ಗಳಲ್ಲಿ ನಾಣ್ಯಗಳನ್ನು ಸ್ವೀಕರಿಸುತ್ತಿರಲಿಲ್ಲ. ಇದರಿಂದಾಗಿ ಸಣ್ಣ ವ್ಯಾಪಾರಿಗಳು, ವರ್ತಕರು, ಜನಸಾಮಾನ್ಯರು ನಾಣ್ಯಗಳನ್ನು ಸ್ವೀಕರಿಸಲು ಹಿಂದೇಟು ಹಾಕಿದ್ದರು.

ಇದರಿಂದಾಗಿ ಹೆಚ್ಚಿನವರು ನಾಣ್ಯಗಳನ್ನು ತಮ್ಮಲ್ಲಿಯೇ ಸಂಗ್ರಹಿಸಿಟ್ಟುಕೊಂಡಿದ್ದರು. ಈ ಬಗ್ಗೆ ವ್ಯಾಪಕ ದೂರುಗಳು ಕೇಳಿ ಬಂದ ಹಿನ್ನಲೆಯಲ್ಲಿ ಬ್ಯಾಂಕ್ ಗಳಲ್ಲಿ ನಾಣ್ಯಗಳನ್ನು ಸ್ವೀಕರಿಸಲು ನಾಣ್ಯ ಮೇಳಗಳನ್ನು ನಡೆಸುವಂತೆ ಆರ್.ಬಿ.ಐ. ಸೂಚನೆ ನೀಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...