alex Certify
ಕನ್ನಡ ದುನಿಯಾ       Mobile App
       

Kannada Duniya

ವಾಹನ ಮಾಲೀಕರಿಗೆ ಆತಂಕದ ಸುದ್ದಿ

card-petro

ಬೆಂಗಳೂರು: ದೊಡ್ಡ ಮೊತ್ತದ ನೋಟ್ ಬ್ಯಾನ್ ಬಳಿಕ, ಕ್ಯಾಶ್ ಲೆಸ್ ವ್ಯವಹಾರಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ.

ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್ ಗಳಿಗೆ ಬೇಡಿಕೆ ಬಂದಿದ್ದು, ಪೆಟ್ರೋಲ್ ಬಂಕ್ ಗಳಲ್ಲಿ ಹೆಚ್ಚಿನ ಗ್ರಾಹಕರು ಕಾರ್ಡ್ ಬಳಸುತ್ತಿದ್ದಾರೆ.

ಆದರೆ, ಇಂದು ಮಧ್ಯರಾತ್ರಿಯಿಂದಲೇ ಪೆಟ್ರೋಲ್ ಬಂಕ್ ಗಳಲ್ಲಿ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ ಗಳನ್ನು ಸ್ವೀಕರಿಸದಿರಲು ಪೆಟ್ರೋಲ್ ಬಂಕ್ ಗಳ ಮಾಲೀಕರು ತೀರ್ಮಾನ ಕೈಗೊಂಡಿದ್ದಾರೆ.

ಬಂಕ್ ಮಾಲೀಕರಿಗೆ ಶೇ. 1 ರಷ್ಟು ಸರ್ವೀಸ್ ಟ್ಯಾಕ್ಸ್ ಹಾಕಲು ಬ್ಯಾಂಕ್ ಗಳು ಮುಂದಾಗಿವೆ ಇದನ್ನು ವಿರೋಧಿಸಿ, ರಾಜ್ಯಾದ್ಯಂತ ಇಂದು ರಾತ್ರಿಯಿಂದ ಕ್ರೆಡಿಟ್ ಕಾರ್ಡ್ ಹಾಗೂ ಡೆಬಿಟ್ ಕಾರ್ಡ್ ಗಳನ್ನು ಬಳಸದಿರಲು ತೀರ್ಮಾನ ಕೈಗೊಂಡಿರುವುದಾಗಿ ಪೆಟ್ರೋಲ್ ಮಾಲೀಕರ ಸಂಘದ ಅಧ್ಯಕ್ಷ ರವೀಂದ್ರನಾಥ್ ಬಿ.ಆರ್. ತಿಳಿಸಿದ್ದಾರೆ.

ನಗದು ರಹಿತ ವ್ಯವಹಾರ ಮಾಡಲು ಹೇಳುವುದೆನೋ ಸರಿ. ಆದರೆ ಶೇ. 1 ರಷ್ಟು ಸೇವಾ ತೆರಿಗೆ ಹಾಕುತ್ತಿರುವುದು ಸರಿಯಲ್ಲ ಎಂದು ಹೇಳಿದ್ದಾರೆ.

ನಾಳೆಯಿಂದ ಪೆಟ್ರೋಲ್ ಬಂಕ್ ಗಳಲ್ಲಿ ಕ್ರೆಡಿಟ್, ಡೆಬಿಟ್ ಕಾರ್ಡ್ ಗಳಿಗೆ ಶೇ. 1 ರಷ್ಟು ಸೇವಾ ತೆರಿಗೆ ಹಾಕಲಿರುವ ಹಿನ್ನಲೆಯಲ್ಲಿ ಇಂದು ಮಧ್ಯರಾತ್ರಿಯಿಂದಲೇ ಕಾರ್ಡ್ ಸ್ವೀಕರಿಸದಿರಲು ಪೆಟ್ರೋಲ್ ಬಂಕ್ ಮಾಲೀಕರು ತೀರ್ಮಾನಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕರಾವಳಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ರಾಜ್ಯ ಸರ್ಕಾರ ವಿಫಲವಾಗಿದೆಯೇ..?

    View Results

    Loading ... Loading ...