alex Certify
ಕನ್ನಡ ದುನಿಯಾ       Mobile App
       

Kannada Duniya

ಗುಡ್ ನ್ಯೂಸ್! ತೊಗರಿ ಬೆಳೆಗಾರರಿಗೆ ಡಬಲ್ ಧಮಾಕ

ಬೆಂಗಳೂರು: ತೊಗರಿಗೆ 550 ರೂ. ಪ್ರೋತ್ಸಾಹಧನ ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಶೀಘ್ರವೇ ಖರೀದಿ ಕೇಂದ್ರಗಳನ್ನು ಆರಂಭಿಸಲಿದೆ.

ಈ ಬಾರಿ ತೊಗರಿ ಬೆಳೆ ಉತ್ತಮವಾಗಿದ್ದು, ರೈತರು ಉತ್ತಮ ಧಾರಣೆಯ ನಿರೀಕ್ಷೆಯಲ್ಲಿದ್ದಾರೆ. ಡಬಲ್ ಧಮಾಕ ಎನ್ನುವಂತೆ ಕೇಂದ್ರ ಸರ್ಕಾರದ 5450 ರೂ. ಕನಿಷ್ಟ ಬೆಂಬಲ ಬೆಲೆ ಜೊತೆಗೆ, ರಾಜ್ಯ ಸರ್ಕಾರ 550 ರೂ. ಪ್ರೋತ್ಸಾಹ ಧನ ನೀಡಲಿದೆ. ಪ್ರತಿ ಕ್ವಿಂಟಾಲ್ ಗೆ 6000 ರೂ. ದರದಲ್ಲಿ ತೊಗರಿ ಖರೀದಿಸಲು ಸರ್ಕಾರ ನಿರ್ಧರಿಸಿದೆ.

ಪ್ರತಿ ರೈತರಿಂದ 6000 ರೂ. ದರದಲ್ಲಿ 20 ಕ್ವಿಂಟಾಲ್ ತೊಗರಿ ಖರೀದಿಗೆ ತೀರ್ಮಾನಿಸಲಾಗಿದ್ದು, ರಾಜ್ಯದಲ್ಲಿ ಖರೀದಿ ಮಿತಿಯನ್ನು 16.50 ಲಕ್ಷ ಕ್ವಿಂಟಾಲ್ ಗೆ ನಿಗದಿ ಮಾಡಲಾಗಿದೆ. ರಾಜ್ಯ ಸರ್ಕಾರ ಪ್ರತಿ ಕ್ವಿಂಟಾಲ್ ಗೆ 550 ರೂ. ಪ್ರೋತ್ಸಾಹಧನ ನೀಡುವುದರಿಂದ 91 ಕೋಟಿ ರೂ. ಹೊರೆಯಾಗಲಿದ್ದು, ಇದನ್ನು ಭರಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಒಪ್ಪಿಗೆ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...