alex Certify
ಕನ್ನಡ ದುನಿಯಾ       Mobile App
       

Kannada Duniya

ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಲು ಗಡುವು ವಿಸ್ತರಣೆ

ಬ್ಯಾಂಕ್ ಖಾತೆಗಳಿಗೆ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಲು ಡಿಸೆಂಬರ್ 31ರವರೆಗೆ ಕಾಲಾವಕಾಶ ನೀಡಿದ್ದ ಕೇಂದ್ರ ಸರ್ಕಾರ, ಅನಿರ್ದಿಷ್ಟಾವಧಿವರೆಗೆ ಗಡುವನ್ನು ವಿಸ್ತರಿಸಿದೆ. ಸದ್ಯದಲ್ಲೇ ಹೊಸ ದಿನಾಂಕವನ್ನು ಪ್ರಕಟಿಸಲಿದೆ. ಈ ಬಗ್ಗೆ ನಾಳೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ಇರುವುದರಿಂದ ಗಡುವು ವಿಸ್ತರಣೆ ಮಾಡಲಾಗಿದೆ.

ಹೊಸ ಬ್ಯಾಂಕ್ ಖಾತೆ ತೆರೆಯಲು ಇಚ್ಛಿಸುವವರು 6 ತಿಂಗಳುಗಳೊಳಗೆ ಆಧಾರ್ ವಿವರವನ್ನು ಬ್ಯಾಂಕ್ ಗೆ ಸಲ್ಲಿಸಬೇಕು ಅಂತಾ ಹೇಳಲಾಗ್ತಿದೆ. ಮನಿ ಲಾಂಡರಿಂಗ್ ವಿರೋಧಿ ಕಾನೂನಿನ ಪ್ರಕಾರ ಪ್ಯಾನ್ ನಂಬರ್ ಹಾಗೂ ಆಧಾರ್ ಸಂಖ್ಯೆಯನ್ನು ಸರ್ಕಾರದ ಸೇವೆಯೊಂದಿಗೆ ಲಿಂಕ್ ಮಾಡುವುದು ಕಡ್ಡಾಯ ಅಂತಾ ಈಗಾಗ್ಲೇ ಸ್ಪಷ್ಟಪಡಿಸಿದೆ.

ವಿಶೇಷ ಗುರುತಿನ ಚೀಟಿ ಪ್ರಾಧಿಕಾರ ಸಾರ್ವಜನಿಕರಿಗೆ ಆಧಾರ್ ಸಂಖ್ಯೆಯನ್ನು ವಿತರಿಸುತ್ತಿದೆ. ಆದಾಯ ತೆರಿಗೆ ಇಲಾಖೆ ಮೂಲಕ ಭಾರತದ ನಾಗರಿಕರು ಪ್ಯಾನ್ ಕಾರ್ಡ್ ಪಡೆದುಕೊಳ್ಳಬಹುದಾಗಿದೆ. ಆಧಾರ್ ಅನ್ನು ಎಲ್ಲಾ ಸೇವೆಗಳಿಗೆ ಕಡ್ಡಾಯ ಮಾಡಿರುವ ಸರ್ಕಾರದ ಕ್ರಮ ಸೂಕ್ತವಲ್ಲ ಅಂತಾ ಸುಪ್ರೀಂ ಕೋರ್ಟ್ ಗೂ ಅರ್ಜಿ ಸಲ್ಲಿಸಲಾಗಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...