alex Certify
ಕನ್ನಡ ದುನಿಯಾ       Mobile App
       

Kannada Duniya

ಡೆಬಿಟ್ ಕಾರ್ಡ್ ಬಳಕೆದಾರರಿಗೆ ಸಿಹಿ ಸುದ್ದಿ

jetli

ನವದೆಹಲಿ: ನೋಟ್ ಬ್ಯಾನ್ ಬಳಿಕ, ನಗದು ರಹಿತ ವ್ಯವಹಾರಕ್ಕೆ ಉತ್ತೇಜನ ನೀಡಿರುವ ಕೇಂದ್ರ ಸರ್ಕಾರ, ಡಿಜಿಟಲ್ ಪಾವತಿ ಶುಲ್ಕ ಇಳಿಸಲು ತೀರ್ಮಾನಿಸಿದೆ.

ಕೇಂದ್ರ ಹಣಕಾಸು ಖಾತೆ ಸಚಿವ ಅರುಣ್ ಜೇಟ್ಲಿ ಈ ಕುರಿತು ಮಾಹಿತಿ ನೀಡಿದ್ದು, ಡಿಜಿಟಲ್ ವ್ಯವಹಾರ ಹೆಚ್ಚಾದಂತೆ ಕಾರ್ಡ್ ಬಳಕೆ ಮೇಲಿನ ಶುಲ್ಕ ಕಡಿಮೆಯಾಗಲಿದೆ ಎಂದು ತಿಳಿಸಿದ್ದಾರೆ.

ರಾಜ್ಯಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಅವರು, ಭಾರತೀಯ ರಿಸರ್ವ್ ಬ್ಯಾಂಕ್(ಆರ್.ಬಿ.ಐ.) ಡೆಬಿಟ್ ಕಾರ್ಡ್ ಮೂಲಕ 2 ಲಕ್ಷ ರೂ. ಗಿಂತ ಹೆಚ್ಚಿನ ಮೊತ್ತದ ವಹಿವಾಟು ನಡೆಸುವವರಿಗೆ ಶುಲ್ಕ ನಿಗದಿ ಮಾಡುವ ಕುರಿತು ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.

1000 ರೂ. ವರೆಗಿನ ವ್ಯವಹಾರಕ್ಕೆ 25 ಪೈಸೆ, 2000 ರೂ. ವರೆಗಿನ ವ್ಯವಹಾರಗಳಿಗೆ 50 ಪೈಸೆ ಹಾಗೂ 2000 ರೂ ಮೇಲ್ಪಟ್ಟ ವ್ಯವಹಾರಗಳಿಗೆ ನಿಗದಿತ ಶುಲ್ಕ ವಿಧಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಪೆಟ್ರೋಲ್ ಬಂಕ್ ಗಳಲ್ಲಿ ಕಾರ್ಡ್ ಬಳಕೆ ಶುಲ್ಕವನ್ನು ಕಂಪನಿಗಳು ಭರಿಸುತ್ತವೆ ಎಂದು ಅವರು ಮಾಹಿತಿ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...