alex Certify
ಕನ್ನಡ ದುನಿಯಾ       Mobile App
       

Kannada Duniya

ಡೆಬಿಟ್ ಕಾರ್ಡ್ ಬಳಕೆದಾರರಿಗೆ ‘ಗುಡ್ ನ್ಯೂಸ್’: ಮತ್ತಷ್ಟು ಸುರಕ್ಷಿತವಾಗಲಿದೆ ವಹಿವಾಟು

ದೇಶದಲ್ಲಿ ಈಗ ಡಿಜಿಟಲ್ ವಹಿವಾಟು ಹೆಚ್ಚಾಗುತ್ತಿದ್ದು ಇದರ ಜೊತೆಜೊತೆಗೆ ಆನ್ ಲೈನ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ. ಎಲ್ಲಿಯೋ ಇರುವ ವಂಚಕರು ತಾವು ಕುಳಿತಲ್ಲಿಂದಲೇ ಈ ಕೆಲಸವನ್ನು ಮಾಡುವ ಕಾರಣ ಅಂತಹ ಪ್ರಕರಣಗಳಲ್ಲಿ ಅಪರಾಧಿಗಳು ಸಿಕ್ಕಿಬೀಳುವುದು ಕಷ್ಟ.

ಹೀಗಾಗಿಯೇ ಭಾರತೀಯ ರಿಸರ್ವ್ ಬ್ಯಾಂಕ್, ಡೆಬಿಟ್/ಕ್ರೆಡಿಟ್ ಕಾರ್ಡ್ ಬಳಕೆ ವೇಳೆ ಆಗುತ್ತಿರುವ ವಂಚನೆಯನ್ನು ನಿಯಂತ್ರಿಸಲು ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದೆ. ಡೆಬಿಟ್/ಕ್ರೆಡಿಟ್ ಕಾರ್ಡ್ ಬಳಕೆ ವೇಳೆ ಟೋಕನ್ ವ್ಯವಸ್ಥೆಯನ್ನು ಜಾರಿಗೊಳಿಸಲು ಚಿಂತನೆ ನಡೆಸಿದೆ.

ಇದು ಜಾರಿಗೆ ಬಂದರೆ ಡೆಬಿಟ್/ಕ್ರೆಡಿಟ್ ಕಾರ್ಡ್ ಬಳಕೆದಾರರು ವಹಿವಾಟಿಗೆ ಇದನ್ನು ಬಳಸಿಕೊಳ್ಳುವ ವೇಳೆ ತಮ್ಮ ಮೂಲ ಕಾರ್ಡ್ ನಲ್ಲಿರುವ ಮಾಹಿತಿಯನ್ನು ನೀಡಬೇಕಾದ ಅಗತ್ಯವಿರುವುದಿಲ್ಲ. ಆಯಾ ವಹಿವಾಟಿಗೆ ತಕ್ಕಂತೆ ಟೋಕನ್ ವ್ಯವಸ್ಥೆ ಲಭ್ಯವಾಗುವುದರಿಂದ ಅದನ್ನು ಬಳಸಿಕೊಂಡರೆ ಸಾಕಾಗುತ್ತದೆ.

ಇದರಿಂದಾಗಿ ಡೆಬಿಟ್/ಕ್ರೆಡಿಟ್ ಕಾರ್ಡ್ ಬಳಕೆದಾರರು ತಮ್ಮ ಕಾರ್ಡ್ ಮಾಹಿತಿಯನ್ನು ವಂಚಕರ ಕೈಗೆ ಸಿಗದಂತೆ ಸುರಕ್ಷಿತವಾಗಿಟ್ಟುಕೊಳ್ಳಬಹುದಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...